ಶನಿವಾರ, ಫೆಬ್ರವರಿ 27, 2021
31 °C

ಆಶಾ ಕಾರ್ಯಕರ್ತೆಯರ ಸೇವೆಗೆ ಬೆಲೆ ಕಟ್ಟಲಾಗದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ: ‘ಕೊರೊನಾ ಸೋಂಕು ಭೀತಿಯಲ್ಲೂ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರ ಸೇವೆಗೆ ಬೆಲೆ ಕಟ್ಟಲಾಗದು. ಅವರ ಕಾರ್ಯ ಶ್ಲಾಘನೀಯವಾದುದು’ ಎಂದು ಐಗಳಿ ಪಿಎಸ್ಐ ಕೆ.ಎಸ್. ಕೊಚೇರಿ ಹೇಳಿದರು.

ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ಪತ್ರಕರ್ತರು, ಹೆಸ್ಕಾಂ, ಪೋಲಿಸ್ ಹಾಗೂ ಪಂಚಾಯಿತಿ ಸಿಬ್ಬಂದಿಗೆ ಮಂಗಳವಾರ ಕೋಹಳ್ಳಿಯಲ್ಲಿ ಗ್ರಾಮ ಪಂಚಾಯಿತಿಯಿಂದ ಆಯೋಜಿಸಿದ್ದ ಸತ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೊರೊನಾ ಯೋಧರಿಗೆ ಯಾರಾದರೂ ಬೆದರಿಕೆ ಹಾಕಿದರೆ, ನಿಂದಿಸಿದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಆಶಾ  ಕಾರ್ಯಕರ್ತೆಯರು ಯಾವುದೇ ಕಾರಣಕ್ಕೂ ಹೆದರಬಾರದು’ ಎಂದರು.

‘ಆಶಾ ಕಾರ್ಯಕರ್ತೆಯರಿಗೆ ಸರ್ಕಾರವು ಸೇವಾ ಭದ್ರತೆ ಹಾಗೂ ಕನಿಷ್ಠ ವೇತನ ನೀಡಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೋನವ್ವ ಉಮರಾಣಿ ಒತ್ತಾಯಿಸಿದರು.

ಪಿಡಿಒ ಈರಪ್ಪ ತಮದಡ್ಡಿ ಮಾತನಾಡಿದರು. ಪಂಚಾಯಿತಿ ಉಪಾಧ್ಯಕ್ಷ ಶ್ರೀಕಾಂತ ಆಲಗೂರ, ತಾಲ್ಲೂಕು ಪಂಚಾಯಿತಿ ಸದಸ್ಯ ಸದಾಶಿವ ಹರಪಾಳೆ, ರವಿ ಮುದಗೌಡರ, ದುಂಡಪ್ಪ ಬಾಡಗಿ, ವಸಂತ ಝರೆ, ದುಂಡಪ್ಪ ಡಂಬಳಿ, ಮಲಿಕಸಾಬ ಪಡಸಲಗಿ, ಹಣಮಂತ ಕನ್ನಾಳ, ಚಿದಾನಂದ ತಳಕೇರಿ, ಶರಣಪ್ಪ ಮುಧೋಳ, ರಮೇಶ ಉಮರಾಣಿ, ಸಂಗಪ್ಪ ಡಂಬಳಿ, ಕೇಧಾರಿ ವಳಸಂಗ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು