ಬೆಳಗಾವಿ: ಇಲ್ಲಿನ ಕಪಿಲೇಶ್ವರ ಹೊಂಡದ ಬಳಿ ಗಣೇಶ ಮೂರ್ತಿಗಳ ವಿಸರ್ಜನೆ ಕಾಲಕ್ಕೆ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ಮರಾಠಿ ನಾಮಫಲಕಕ್ಕೆ ಆಗ್ರಹಿಸಿ ನಡೆಸಿದ ಪುಂಡಾಟಿಕೆಯನ್ನು ಸಮರ್ಥವಾಗಿ ಎದುರಿಸಿ ಎದುರೇಟು ನೀಡಿದ ಮಹಾನಗರ ಪಾಲಿಕೆಯ ಉಪ ಆಯುಕ್ತೆ ಲಕ್ಷ್ಮಿ ಸುಳಗೇಕರ ಹಾಗೂ ಕನ್ನಡ ಬಳಕೆಯಲ್ಲಿ ಬದ್ಧತೆ ಪ್ರದರ್ಶಿಸಿದ ಆಯುಕ್ತ ರುದ್ರೇಶ ಘಾಳಿ ಅವರನ್ನು ಕನ್ನಡ ಪರ ಸಂಘಟನೆಗಳ ಮುಖಂಡರು ಮಂಗಳವಾರ ಸನ್ಮಾನಿಸಿ ಅಭಿನಂದಿಸಿದರು.

‘ಗಡಿ ನಾಡಿನಲ್ಲಿ ಕನ್ನಡದ ಕೆಲಸದಲ್ಲಿ ರಾಜಿ ಮಾಡಿಕೊಳ್ಳದ ಅಧಿಕಾರಿಗಳ ಬೆಂಬಲವಾಗಿ ನಿಲ್ಲುತ್ತೇವೆ’ ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಂಚಾಲಕ ಮಹಾದೇವ ತಳವಾರ, ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಮೈನೋದ್ದೀನ್ ಮಕಾನದಾರ, ಕಿರಣ ಮಾಳನ್ನವರ, ಸಾಗರ ಬೋರಗಲ್ಲ, ವೀರೇಂದ್ರ ಗೋಬರಿ, ವಿಶಾಲ ತಿಗಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.