ಶುಕ್ರವಾರ, ಅಕ್ಟೋಬರ್ 22, 2021
29 °C

ಬೆಳಗಾವಿ: ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ 14 ಜನರ ಚಿಕಿತ್ಸೆಗೆ ಲಕ್ಷ್ಮಿ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಗ್ರಾಮೀಣ ವಿಧಾನಸಭಾ ಕ್ಷೇತ್ರದ 14 ಜನರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹ 7.15 ಲಕ್ಷ ಮಂಜೂರು ಮಾಡಿಸಿದ್ದಾರೆ.

ಆಸ್ಪತ್ರೆಯ ವೆಚ್ಚವನ್ನು ಭರಿಸಲಾಗದೆ ನೆರವು ಕೋರಿ ಹಲವರು ಹೆಬ್ಬಾಳಕರ ಅವರನ್ನು ಸಂಪರ್ಕಿಸಿದ್ದರು. ಪರಿಹಾರ ನಿಧಿಯಿಂದ ಹಣ ಮಂಜೂರು ಮಾಡುವಂತೆ ಶಿಫಾರಸು ಮಾಡಿದ್ದರು. ಆದೇಶಪತ್ರವನ್ನು ಫಲಾನುಭವಿಗಳಿಗೆ ಶನಿವಾರ ವಿತರಿಸಿದರು. ‘ವೈಯಕ್ತಿಕವಾಗಿಯೂ ಸಹಾಯ ಮಾಡಿದ್ದೇನೆ’ ಎಂದು ತಿಳಿಸಿದರು.

ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಮುಖಂಡರಾದ ಚನ್ನರಾಜ ಹಟ್ಟಿಹೊಳಿ ಮತ್ತು ಮೃಣಾಲ ಹೆಬ್ಬಾಳಕರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು