ಶನಿವಾರ, ಸೆಪ್ಟೆಂಬರ್ 18, 2021
27 °C

ದೇವಸ್ಥಾನಗಳಿಗೆ ಆರ್ಥಿಕ ನೆರವು ವಿತರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಬೀರದೇವರ ಹಾಗೂ ವಿಠ್ಠಲ ರುಕ್ಮಿಣಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಆಯಾ ದೇಗುಲಗಳ ಸಮಿತಿಯವರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಧನಸಹಾಯದ ಚೆಕ್‌ಗಳನ್ನು ಸೋಮವಾರ ವಿತರಿಸಿದರು.

‘ಕ್ಷೇತ್ರದ ಎಲ್ಲ ದೇವಸ್ಥಾನಗಳನ್ನೂ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಶಾಸಕರ ಅನುದಾನದಲ್ಲಿ ಹಾಗೂ ಕೆಲವೆಡೆ ವೈಯಕ್ತಿಕವಾಗಿ ಕೂಡ ನೆರವು ನೀಡುತ್ತಿದ್ದೇನೆ. ಬೀರದೇವರ ದೇವಸ್ಥಾನಕ್ಕೆ ₹ 6.50 ಲಕ್ಷ ಪೈಕಿ ಮೊದಲ ಕಂತಾಗಿ ₹ 3.50 ಲಕ್ಷ ಹಾಗೂ ವಿಠ್ಠಲ ರುಕ್ಮಿಣಿ ದೇವಸ್ಥಾನಕ್ಕೆ ₹ 3.50 ಲಕ್ಷ ಪೈಕಿ ಮೊದಲ ಕಂತಾಗಿ ₹ 1.95 ಲಕ್ಷ ಚೆಕ್‌ಗಳನ್ನು ನೀಡಲಾಗಿದೆ’ ಎಂದರು.

ಗ್ರಾಮದ ಹಿರಿಯರು, ಮುಖಂಡ ನಾಗೇಶ ದೇಸಾಯಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಆಯಾ ದೇವಸ್ಥಾನಗಳ ಸಮಿತಿಯವರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು