ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಲಾಕ್‌ಡೌನ್‌ ನಿಯಮ ಉಲ್ಲಂಘನೆ: ₹ 1.05 ಲಕ್ಷ ದಂಡ

Last Updated 13 ಮೇ 2020, 14:44 IST
ಅಕ್ಷರ ಗಾತ್ರ

ಬೆಳಗಾವಿ: ‘ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ನಗರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಸಂಚರಿಸುತ್ತಿದ್ದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ಇದುವರೆಗೆ ₹ 1.05 ಲಕ್ಷ ದಂಡ ವಿಧಿಸಲಾಗಿದೆ’ ಎಂದು ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ತಿಳಿಸಿದ್ದಾರೆ.

‘ಲಾಕ್‌ಡೌನ್-3ರ ಸಂದರ್ಭದಲ್ಲಿ ಕಿತ್ತಳೆ ವಲಯದಲ್ಲಿರುವ ಜಿಲ್ಲೆಯಲ್ಲಿ ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದು, ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲು ಅವಕಾಶ ಕಲ್ಪಿಸಿದ್ದಾರೆ. ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT