ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಗ್ಯಾಸ್‌ ಸ್ಟೌ ಅಂಗಡಿಯಲ್ಲಿ ಬೆಂಕಿ ಅವಘಡ

Published 17 ಫೆಬ್ರುವರಿ 2024, 8:32 IST
Last Updated 17 ಫೆಬ್ರುವರಿ 2024, 8:32 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಖಡೇಬಜಾರ್‌ನ ಎಲ್‌ಪಿಜಿ ಗ್ಯಾಸ್‌ ಸ್ಟೌ ಅಂಗಡಿಯಲ್ಲಿ ಶುಕ್ರವಾರ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾರುಕಟ್ಟೆ ಪ್ರದೇಶದಲ್ಲೇ ಅವಘಡ ಸಂಭವಿಸಿದ್ದರಿಂದ ಸುತ್ತಲಿನ ವ್ಯಾಪಾರಿಗಳು ಹಾಗೂ ಗ್ರಾಹಕರು ಚೆಲ್ಲಾಪಿಲ್ಲಿಯಾಗಿ ಓಡಿದರು.

ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತ್ವರಿತವಾಗಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದರು.

‘ಈ ಅಂಗಡಿಯಲ್ಲಿ ಸಿಲಿಂಡರ್‌ಗೆ ಅಡುಗೆ ಅನಿಲ ಭರ್ತಿ ಮಾಡಿಕೊಡಲಾಗುತ್ತಿತ್ತು. ಗ್ಯಾಸ್‌ ಸ್ಟೌ ದುರಸ್ತಿ ಮತ್ತು ಮಾರಾಟ ಮಾಡಲಾಗುತ್ತಿತ್ತು. ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದೆ. ಮೂರ್ನಾಲ್ಕು ಸಿಲಿಂಡರ್‌ ಸ್ಫೋಟಗೊಂಡಿರುವ ಸಾಧ್ಯತೆ ಇದೆ’ ಎಂದು ಅಗ್ನಿಶಾಮಕ ಠಾಣೆ ಅಧಿಕಾರಿಗಳು ತಿಳಿಸಿದರು.

ಈ ಪ್ರದೇಶ ಸದಾ ಜನದಟ್ಟಣೆಯಿಂದ ಕೂಡಿರುತ್ತದೆ. ನೂರಾರು ಜನರು ವ್ಯಾಪಾರ ವಹಿವಾಟು ಕೈಗೊಳ್ಳುತ್ತಾರೆ. ಬೆಂಕಿ ಅವಘಡ ಸಂಭವಿಸಿದ ಕಾರಣ, ಪೊಲೀಸರು ಕೆಲಹೊತ್ತು ಜನಸಂಚಾರ ತಡೆದರು. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನೂ ಕಡಿತಗೊಳಿಸಲಾಗಿತ್ತು. ಕೆಲವು ವ್ಯಾಪಾರಸ್ಥರು ಅಂಗಡಿಗಳನ್ನು ಮುಚ್ಚಿ, ರಕ್ಷಣಾ ಕಾರ್ಯಾಚರಣೆಗೆ ನೆರವಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT