ಶನಿವಾರ, ಅಕ್ಟೋಬರ್ 31, 2020
21 °C

ಬೆಳಗಾವಿಯಿಂದ ಚೆನ್ನೈಗೆ ವಿಮಾನ ಪುನರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬೆಳಗಾವಿಯಿಂದ ಮೈಸೂರು ಮಾರ್ಗವಾಗಿ ಚೆನ್ನೈಗೆ ವಿಮಾನ ಹಾರಾಟ ಅ.1ರಿಂದ ಆರಂಭಗೊಳ್ಳಲಿದೆ ಎಂದು ಸಾಂಬ್ರಾ ವಿಮಾನ ನಿಲ್ದಾಣ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ತಿಳಿಸಿದ್ದಾರೆ.

ಟ್ರೂಜೆಟ್ ಕಂಪನಿಯ ವಿಮಾನವು ವಾರದಲ್ಲಿ ಮೂರು ದಿನಗಳು ಅಂದರೆ ಮಂಗಳವಾರ, ಗುರುವಾರ ಹಾಗೂ ಶನಿವಾರ ಮೈಸೂರು ಮೂಲಕ ಚೆನ್ನೈಗೆ ಹಾರಾಡಲಿದೆ. ತಾಂತ್ರಿಕ ತೊಂದರೆಯಿಂದ ಈ ಮಾರ್ಗದಲ್ಲಿ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಪುನರಾರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲೂ ಮಳೆ

ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ತಡರಾತ್ರಿಯಿಂದಲೂ ಜಿಟಿಜಿಟಿ ಮಳೆಯಾಗುತ್ತಿದೆ.
 
ತಾಲ್ಲೂಕಿನ ಹಿರೇಬಾಗೇವಾಡಿ ಸೇರಿದಂತೆ ವಿವಿಧೆಡೆ, ಚಿಕ್ಕೋಡಿ, ಬೈಲಹೊಂಗಲ, ಕೌಜಲಗಿ, ಗೋಕಾಕ, ಮುನವಳ್ಳಿ ಪ್ರದೇಶದಲ್ಲಿ ಮಳೆ ಆಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು