ಸಾಂಬ್ರಾ: ಇಂಡಿಗೋ ಏರ್ಲೈನ್ಸ್ ವತಿಯಿಂದ ಬೆಳಗಾವಿ– ಬೆಂಗಳೂರು ಮಾರ್ಗದಲ್ಲಿ ಆರಂಭಿಸಿದ ಮತ್ತೊಂದು ವಿಮಾನ ಯಾನಕ್ಕೆ ಇಲ್ಲಿನ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಈಚೆಗೆ ಚಾಲನೆ ನೀಡಿದರು.

ಬೆಳಗಾವಿ ನಗರ ವಾಣಿಜ್ಯ ಕೇಂದ್ರವಾಗಿ ಬೆಳೆಯುತ್ತಿದೆ. ಬೆಂಗಳೂರು ಹೊರತುಪಡಿಸಿದರೆ ಅತಿ ಹೆಚ್ಚು ಪ್ರಯಾಣಿಕರನ್ನು ಹೊಂದಿದ್ದು ಬೆಳಗಾವಿ ವಿಮಾನ ನಿಲ್ದಾಣ ಎಂಬ ಕೀರ್ತಿ ನಮಗೆ ಸಲ್ಲುತ್ತದೆ. ಇಲ್ಲಿ ಇನ್ನೂ ಹೆಚ್ಚು ವಿಮಾನ ಸೇವೆಗಳು ಆರಂಭವಾಗಬೇಕಾಗಿದೆ. ಈ ಸಂಚಾರ ಆರಂಭಿಸಿದ ಇಂಡಿಗೋ ಏರ್ಲೈನ್ಸ್ ಹಾಗೂ ಈಗಾಗಲೇ ಸೇವೆ ನೀಡುತ್ತಿರುವ ಸ್ಪೈಸ್ ಜೆಟ್, ಸ್ಟಾರ್ ಏರ್ ಸಂಸ್ಥೆಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಕಡಾಡಿ ಹೇಳಿದರು.

ಸಂಸದೆ ಮಂಗಲಾ ಅಂಗಡಿ, ಶಾಸಕ ಅನಿಲ ಬೆನಕೆ, ವಿಮಾನ ನಿಲ್ದಾಣ ನಿರ್ದೇಶಕ ರಾಜೇಶಕುಮಾರ ಮೌರ್ಯ, ಸಿಪಿಐ ಈರಪ್ಪ ವಾಲಿ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.