ಶನಿವಾರ, ಆಗಸ್ಟ್ 24, 2019
27 °C

ಮಹಾರಾಷ್ಟ್ರದಿಂದ ಮತ್ತಷ್ಟು ನೀರು; ರಾಜ್ಯದಲ್ಲಿ ಪ್ರವಾಹ ಭೀತಿ

Published:
Updated:

ಬೆಳಗಾವಿ: ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಮತ್ತಷ್ಟು ಹೆಚ್ಚಿದ್ದು ಕೊಯ್ನಾ, ವಾರ್ಣಾ ಮತ್ತಿತರ ಜಲಾಶಯಗಳು ಶೇ 90ರಷ್ಟು ಭರ್ತಿಯಾಗಿವೆ. ಹೆಚ್ಚುವರಿ ನೀರು ರಾಜ್ಯದೊಳಗೆ ಪ್ರವೇಶಿಸುತ್ತಿದೆ. ಈಗಾಗಲೇ ಕೃಷ್ಣಾ ಹಾಗೂ ಉಪನದಿಗಳ ತೀರದ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನೂ ಅಪಾಯಕಾರಿ ಸನ್ನಿವೇಶ ಎದುರಾಗುವ ಆತಂಕ ಸೃಷ್ಠಿಯಾಗಿದೆ.

ಬೆಳಗಾವಿ ಜಿಲ್ಲೆಯ ಮೂಲಕ ಹರಿಯುವ ಕೃಷ್ಣಾ ಹಾಗೂ ಉಪನದಿಗಳ ನೀರು ಆಲಮಟ್ಟಿ ಜಲಾಶಯದಲ್ಲಿ ಸಂಗ್ರಹವಾಗುತ್ತಿದೆ. ಪ್ರಸ್ತುತ 519.40 ಮೀಟರ್‌ವರೆಗೆ ನೀರು ಸಂಗ್ರಹಿಸಲಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ. ಕೊಯ್ನಾದಿಂದ ಹೆಚ್ಚಿನ ನೀರು ಬಿಡುವ ಸಾಧ್ಯತೆ ಇರುವುದರಿಂದ ಆಲಮಟ್ಟಿ ಜಲಾಶಯದಿಂದ ಇನ್ನೂ ಹೆಚ್ಚಿನ ನೀರು ಹೊರಬಿಡಬೇಕು. 518.50 ಮೀಟರ್‌ ಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಮಹಾರಾಷ್ಟ್ರ ಸರ್ಕಾರ ರಾಜ್ಯ ಸರ್ಕಾರವನ್ನು ಕೋರಿಕೊಂಡಿದೆ.

ರಾಯಚೂರು– ಯಾದಗಿರಿಗೆ ಆಪತ್ತು:

ಮಹಾರಾಷ್ಟ್ರದ ಮನವಿಯ ಮೇರೆಗೆ 518.50 ಮಿಟರ್‌ ಮಟ್ಟ ಕಾಯ್ದುಕೊಂಡು, ಹೆಚ್ಚಿನ ನೀರು ಸುಮಾರು 1 ಲಕ್ಷ ಕ್ಯುಸೆಕ್‌ಗಿಂತ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟರೆ ರಾಯಚೂರು, ಯಾದಗಿರಿ ಪ್ರದೇಶಗಳಲ್ಲಿ ನೀರು ನುಗ್ಗಲಿದೆ ಎಂದು ನೀರಾವರಿ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Post Comments (+)