ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ, ದೂಧಗಂಗಾ ಹಾಗೂ ವೇದಗಂಗಾ ನದಿಗಳಲ್ಲಿ ನೀರಿನ ಹರಿವಿನ ಪ್ರಮಾಣ ಶುಕ್ರವಾರ 3 ಅಡಿಗಳಷ್ಟು ಇಳಿಕೆಯಾಗಿದೆ.

ಮಹಾರಾಷ್ಟ್ರದ ಕೃಷ್ಣಾ ನದಿಯ ಜಲಾನಯನ ಪ್ರದೇಶದ ಕೊಯ್ನಾದಲ್ಲಿ 8.7 ಸೆಂ.ಮೀ, ವಾರಣಾ 5.3 ಸೆಂ.ಮೀ, ಕಾಳಮ್ಮವಾಡಿ 11.1 ಸೆಂ.ಮೀ, ಮಹಾಬಳೇಶ್ವರ 9.4 ಸೆಂ.ಮೀ, ನವಜಾದ 9.8 ಸೆಂ.ಮೀ, ರಾಧಾನಗರಿ 9.7 ಸೆಂ.ಮೀಗಳಷ್ಟು ಮಳೆ ಪ್ರಮಾಣ ದಾಖಲಾಗಿದೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪೂರೆ ಬ್ಯಾರೇಜಿನಿಂದ ಕೃಷ್ಣಾ ನದಿಗೆ 56,333 ಕ್ಯೂಸೆಕ್ ಹೊರ ಹರಿವು ಇದ್ದು, ಕಲ್ಲೋಳ ಗ್ರಾಮದ ಬಳಿಯಲ್ಲಿ ದೂಧಗಂಗಾ ನದಿಗೆ 11,264 ಕ್ಯೂಸೆಕ್ ಒಳ ಹರಿವು ಇದ್ದು, ತಾಲ್ಲೂಕಿನ ಕಲ್ಲೋಳ-ಯಡೂರ ಸೇತುವೆ ಬಳಿಯಲ್ಲಿ ಕೃಷ್ಣಾ ನದಿಗೆ 67,597 ಕ್ಯೂಸೆಕ್ ಹೊರ ಹರಿವು ಇದೆ.

ತಾಲ್ಲೂಕಿನಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಪೂರ್ವಭಾವಿಯಾಗಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಚಿದಂಬರ ಕುಲಕರ್ಣಿ ನೇತೃತ್ವದಲ್ಲಿ ಚಿಕ್ಕೋಡಿ ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳ ಸಭೆಯನ್ನು ಶುಕ್ರವಾರ ಕರೆಯಲಾಗಿತ್ತು. ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಯಾವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ಚಿದಂಬರ ಕುಲಕರ್ಣಿ ಸಭೆಯಲ್ಲಿ ವಿವರಿಸಿದರು. ತಾಲ್ಲೂಕು ನೋಡಲ್ ಅಧಿಕಾರಿಗಳು, ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ತಾಲ್ಲೂಕಿನ ಮಾಂಜರಿ ಗ್ರಾಮದ ಬಳಿಯಲ್ಲಿ ಕೃಷ್ಣಾ ನದಿಗೆ ಜೂನ್ 17ರಂದು ಪೂಜೆ ಸಲ್ಲಿಸಲು ತೆರಳಿದ್ದ ಗ್ರಾಮದ ನಿವಾಸಿ ಸಂಗೀತಾ ಮಾಂಜರೇಕರ (41) ಶವ ಶುಕ್ರವಾರ ಮಾಂಜರಿ-ಇಂಗಳಿ ನಡುವಿನ ಕೃಷ್ಣಾ ನದಿಯ ಒತ್ತು ಪ್ರದೇಶದಲ್ಲಿ ಪತ್ತೆಯಾಗಿದೆ. ನಾಲ್ಕು ದಿನಗಳಿಂದ ಎಸ್ಡಿಆರ್ಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ 3 ಯಾಂತ್ರಿಕ ದೋಣಿಗಳ ಮೂಲಕ ಶೋಧ ಕಾರ್ಯ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.