ಭಾನುವಾರ, ಜೂಲೈ 5, 2020
23 °C

ಪೌರಕಾರ್ಮಿಕರೊಂದಿಗೆ ಉಪಾಹಾರ ಸೇವಿಸಿ ಗೌರವ ಸೂಚಿಸಿದ ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ತಮ್ಮ ಕ್ಷೇತ್ರದಲ್ಲಿ ಕೊರೊನಾ ಭೀತಿಯ ನಡುವೆಯೂ ಕೆಲಸ ಮಾಡುತ್ತಿರುವ ಪೌರಕಾರ್ಮಿಕರೊಂದಿಗೆ ಮಂಗಳವಾರ ಉಪಾಹಾರ ಸೇವಿಸಿ, ಅವರಿಗೆ ದಿನಸಿ ಕಿಟ್ ವಿತರಿಸಿ ಗೌರವ ಸೂಚಿಸಿದರು.

ಹಿಂದವಾಡಿಯ ಮಹಾವೀರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಪೌರಕಾರ್ಮಿಕರು ಕೊರೊನಾ ಯೋಧರೆ ಸರಿ. ನಗರವನ್ನು ಸ್ವಚ್ಛವಾಗಿಡುವ ಮೂಲಕ ಹೆಚ್ಚಿನ ರೀತಿಯಲ್ಲಿ ಕೊರೊನಾ ಸೋಂಕು ಹರಡದಂತೆ ನೋಡಿಕೊಳ್ಳುವಲ್ಲಿ ಪಾತ್ರ ವಹಿಸಿದ್ದಾರೆ. ಅವರಿಗೆ ಗೌರವ ಸೂಚಿಸುವುದು ನಮ್ಮ ಕರ್ತವ್ಯವಾಗಿದೆ' ಎಂದರು.

ಕಾರ್ಮಿಕ ಇಲಾಖೆಯಿಂದ ಕ್ಷೇತ್ರದಲ್ಲಿನ ಕಟ್ಟಡ ಕಾರ್ಮಿಕರಿಗಾಗಿ 5,000 ಆಹಾರಧಾನ್ಯದ ಕಿಟ್‌ಗಳು ಮಂಜೂರಾಗಿವೆ. ಮೂರ್ನಾಲ್ಕು ದಿನಗಳಲ್ಲಿ ಅವುಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

600 ಪೌರಕಾರ್ಮಿಕರಿಗೆ ಕಿಟ್ ವಿತರಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು