ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆಪೀಡಿತ ಪ್ರದೇಶ: ಗೋದಾಮಿನಲ್ಲೇ ಹಾಳಾದ 'ಆಹಾರ ಕಿಟ್'ಗಳು!

Last Updated 6 ನವೆಂಬರ್ 2019, 19:45 IST
ಅಕ್ಷರ ಗಾತ್ರ

ಅಥಣಿ: ‘ನೆರೆಪೀಡಿತ ಪ್ರದೇಶಗಳ ಜನರಿಗೆಂದು ವಿತರಿಸಲು ಸರ್ಕಾರದಿಂದ ಬಂದಿರುವ ಆಹಾರ ಕಿಟ್‌ಗಳನ್ನು ಸಂಬಂಧಿಸಿದ ಅಧಿಕಾರಿಗಳು ಸಂತ್ರಸ್ತರಿಗೆ ನೀಡದೇ ಗೋದಾಮಿನಲ್ಲಿಯೇ ಹಾಳು ಮಾಡಿದ್ದಾರೆ’ ಎಂದು ಭಾರತೀಯ ಕಿಸಾನ್‌ ಸಂಘ ಅಥಣಿಯ ಕಾರ್ಯದರ್ಶಿ ಭರಮಾ ನಾಯಿಕ ಆರೋಪಿಸಿದ್ದಾರೆ. ಅವರು ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

‘ಸಂತ್ರಸ್ತರಿಗೆ ನೆರವಾಗಲು ಅಕ್ಕಿ, ಬೇಳೆ, ಸಕ್ಕರೆ, ಅಡುಗೆ ಎಣ್ಣೆ ಒಳಗೊಂಡ ಆಹಾರ ಕಿಟ್‌ಗಳನ್ನು ಸಿದ್ಧಪಡಿಸಿ ನೀಡಲಾಗಿದೆ. ಅವುಗಳನ್ನು ಹಲ್ಯಾಳ ಗ್ರಾಮದಲ್ಲಿ ಯಾರೊಬ್ಬರಿಗೂ ಕೊಡದೇ ಗೋದಾಮಿನಲ್ಲೇ ಇಡಲಾಗಿದೆ. ಈ ಮೂಲಕ ಆಹಾರ ಪದಾರ್ಥವನ್ನು ಹಾಳು ಮಾಡಿದ್ದಾರೆ’ ಎಂದು ದೂರಿದ್ದಾರೆ.

‘ನೂರಾರು ಸಾವಿರಾರು ಕಿಟ್‌ಗಳನ್ನು ವ್ಯರ್ಥ ಮಾಡಲಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೂ ನಷ್ಟವಾಗಿದೆ. ಜನರಿಗೂ ಉಪಯೋಗವಾಗಿಲ್ಲ. ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಯನ್ನು ಕೇಳಿದರೆ, ನಮಗೂ ಆ ಕಿಟ್‌ಗಳಿಗೂ ಯಾವುದೇ ಸಂಬಂಧವಿಲ್ಲ ಎಂಬ ಉಡಾಫೆ ಉತ್ತರ ನೀಡುತ್ತಾರೆ. ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಬೇಕು. ತಪ್ಪಿತಸ್ಥರ ವಿರುದ್ಧ ಶಿಸ್ತಕ್ರಮ ಜರುಗಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT