ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಜೀತಪದ್ಧತಿ ನಿರ್ಮೂಲನೆ ಕಾರ್ಯಕ್ರಮ

Published 9 ಫೆಬ್ರುವರಿ 2024, 15:44 IST
Last Updated 9 ಫೆಬ್ರುವರಿ 2024, 15:44 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕಾರ್ಮಿಕ ಇಲಾಖೆ ಹಾಗೂ ಸ್ಪಂದನ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಜೀತಪದ್ಧತಿ ನಿರ್ಮೂಲನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಮುರಳಿಮೋಹನ ರೆಡ್ಡಿ ಉದ್ಘಾಟಿಸಿ ಮಾತನಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ ಪಂಚಾಯ್ತಿ(ಆಡಳಿತ) ಉಪಕಾರ್ಯದರ್ಶಿ ರೇಖಾ ಡೊಳ್ಳೆನ್ನವರ, ಬೆಳಗಾವಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಎಂ.ಬಿ.ಅನ್ಸಾರಿ, ವಿನೋದಕುಮಾರ, ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ ಇದ್ದರು. ನಂತರ ನಡೆದ ಜಾಗೃತಿ ಜಾಥಾಕ್ಕೆ ಗಣ್ಯರು ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT