ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಶಂಕುಸ್ಥಾಪನೆ

Last Updated 13 ಏಪ್ರಿಲ್ 2022, 4:14 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ‌ ಸುಭಾಷ್ ನಗರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದಿಂದ ನಿರ್ಮಿಸಲಾಗುತ್ತಿರುವ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯಕ್ಕೆ ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.

ಕಾರಂಜಿಮಠದ ಗುರುಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಸಂಸದೆ ಮಂಗಲಾ‌ ಅಂಗಡಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ,‌ ಕೆಎಲ್ಇ ಸೊಸೈಟಿ ಕಾರ್ಯಾಧ್ಯಕ್ಷ ಪ್ರಭಾಕರ‌ ಕೋರೆ, ರಾಣಿ ಚನ್ನಮ್ಮ ಮಹಿಳಾ ಸಹಕಾರ ಸೊಸೈಟಿ ಅಧ್ಯಕ್ಷೆ ಆಶಾ ಕೋರೆ, ಕೆಎಲ್ಇ ಸೊಸೈಟಿ ನಿರ್ದೇಶಕ ಮಹಾಂತೇಶ ಕವಟಗಿಮಠ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಉಪಾಧ್ಯಕ್ಷ ಮಾರುತಿ ಝಿರಲಿ ಇದ್ದರು.

'ಇಪ್ಪತ್ತಾಲ್ಕುವರೆ ಎಕರೆ ಜಾಗದಲ್ಲಿ ಹಾಸ್ಟೆಲ್ ನಿರ್ಮಿಸಲಾಗುತ್ತಿದೆ. ಪಿಯು ಹಾಗೂ ಅದರ ನಂತರದ ವಿದ್ಯಾಭ್ಯಾಸಕ್ಕಾಗಿ ಜಿಲ್ಲೆಯ ವಿವಿಧೆಡೆಯಿಂದ ನಗರಕ್ಕೆ ಬರುವ ವೀರಶೈವ ಲಿಂಗಾಯತ ಸಮಾಜದ ಬಡ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಒದಗಿಸಲು ರೂಪಿಸಿರುವ ಯೋಜನೆ ಇದಾಗಿದೆ. ಎರಡು ‌ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು, ಮೊದಲಿಗೆ ಐವತ್ತು ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸಲಾಗುವುದು' ಎಂದು ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT