ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಳಗಾವಿ: ಒಂದೇ ಕುಟುಂಬದ ನಾಲ್ವರು ರೈಲು ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ತಡ ರಾತ್ರಿ ಜಿಲ್ಲೆಯ ರಾಯಬಾಗ ಬಳಿ ನಡೆದಿದೆ.
ಮೃತರನ್ನು ಅದೇ ತಾಲ್ಲೂಕಿನ ಭಿರಡಿ ಗ್ರಾಮದವರು ಎಂದು ಗುರುತಿಸಲಾಗಿದೆ.
ಸಾತಪ್ಪ ಅಣ್ಣಪ್ಪ ಸುತಾರ (60), ಪತ್ನಿ ಮಹಾದೇವಿ ಸಾತಪ್ಪ ಸುತಾರ (50) ಹಾಗೂ ಮಕ್ಕಳಾದ ಸಂತೋಷ ಸಾತಪ್ಪ ಸುತಾರ (26), ದತ್ತಾತ್ರೇಯ ಸಾತಪ್ಪ ಸುತಾರ (28) ಮೃತರು.
ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.