ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಕ್ಕೇರಿ: ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Published 28 ಡಿಸೆಂಬರ್ 2023, 15:04 IST
Last Updated 28 ಡಿಸೆಂಬರ್ 2023, 15:04 IST
ಅಕ್ಷರ ಗಾತ್ರ

ಹುಕ್ಕೇರಿ: ತಾಲ್ಲೂಕಿನ ಅಮ್ಮಿಣಭಾವಿ ಗ್ರಾಮದಲ್ಲಿ ಗುರುವಾರ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಅವರು ಉಜ್ವಲ್ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಒಲೆ ವಿತರಣೆ ಮಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆಯಡಿ ದೇಶದಲ್ಲಿ 8 ಕೋಟಿ ಬಡವರಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಒಲೆ ವಿತರಣೆ ಮಾಡಲಾಗುತ್ತಿದೆ ಎಂದರು.

ಬಿಜೆಪಿ ಕಾರ್ಯಕರ್ತರು ಕೇಂದ್ರ ಸರ್ಕಾರ ರೈತರಿಗೆ, ಬಡವರಿಗೆ ಯಾವ ರೀತಿಯ ಸೌಲಭ್ಯವನ್ನು ನೇರವಾಗಿ ಮುಟ್ಟಿಸುತ್ತಿದೆ ಎಂಬುದನ್ನು ಫಲಾನುಭವಿಗಳಿಗೆ ಮನವರಿಕೆ ಮಾಡಲು ವಿನಂತಿಸಿದರು.

ಹಿರಾ ಶುಗರ್ ಕಾರ್ಖಾನೆ ನಿರ್ದೇಶಕ ಪ್ರಭುದೇವ ಪಾಟೀಲ, ಪಿಕೆಪಿಎಸ್ ಅಧ್ಯಕ್ಷ ಸಿದಗೌಡ ಪಾಟೀಲ, ಮುಖಂಡ ಗಿರೀಶ್ ಪಾಟೀಲ, ಗ್ರಾಮ ಪಂಚಾಯಿತಿ ಸದಸ್ಯರು, ಪಿಕೆಪಿಎಸ್ ಉಪಾಧ್ಯಕ್ಷ, ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT