ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ್ಣು, ತರಕಾರಿ ಮಾರಾಟಕ್ಕೆ ಮುಕ್ತ ಅವಕಾಶ: ಡಿಸಿ ಡಾ.ಎಸ್.ಬಿ.ಬೊಮ್ಮನಹಳ್ಳಿ 

Last Updated 31 ಮಾರ್ಚ್ 2020, 12:58 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಲ್ಲಿ ಎಲ್ಲ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ ರೈತರು ತಾವು ಬೆಳೆದ ತೋಟಗಾರಿಕೆ ಉತ್ಪನ್ನಗಳಾದ ಹಣ್ಣು ಮತ್ತು ತರಕಾರಿಗಳನ್ನು ಸರಬರಾಜು ಮತ್ತು ಸಾಗಾಣಿಕೆ ಮಾಡಲು ಲಾಕ್‌ಡೌನ್ ಆದೇಶದಿಂದ ವಿನಾಯತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ತೋಟಗಾರಿಕೆ ಬೆಳೆಗಾರರು ತಾವು ಬೆಳೆದು ದಾಸ್ತಾನು ಮಾಡಿಕೊಂಡಿರುವ ಹಣ್ಣು ಮತ್ತು ತರಕಾರಿಗಳನ್ನು ಆಯಾ ಸ್ಥಳೀಯ ಮಾರುಕಟ್ಟೆ, ಜಿಲ್ಲಾ ಮಾರುಕಟ್ಟೆ, ಹೊರ ಜಿಲ್ಲೆಗಳಿಗೆ ಮತ್ತು ಹೊರ ರಾಜ್ಯಗಳಿಗೆ ಸಾಗಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ತೋಟಗಾರಿಕೆ ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಸಗಟು ವ್ಯಾಪಾರಿಗಳು ಖರೀದಿಸಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಸಗಟು ವ್ಯಾಪಾರಿಗಳು ಸಾಗಾಣಿಕೆಗೆ ಸಂಬಂಧಿಸಿದ ಕೂಲಿಕಾರರಿಗೆ ಕಡ್ಡಾಯವಾಗಿ ಮಾಸ್ಕ್‌, ಸ್ಯಾನಿಟೈಸರ್‌ಗಳನ್ನು ಒದಗಿಸಬೇಕು ಮತ್ತು ಅವುಗಳನ್ನು ಕಡ್ಡಾಯವಾಗಿ ಉಪಯೋಗಿಸುವ ಮೂಲಕ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಮಾರಾಟ ವ್ಯವಹಾರ ನಡೆಸಬೇಕು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT