ಬೆಳಗಾವಿ: ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನದ 13ನೇ ವಾರ್ಷಿಕೋತ್ಸವ ಅಂಗವಾಗಿ ಜುಲೈ 7ರಂದು ಇಲ್ಲಿನ ಕುಮಾರಗಂಧರ್ವ ಕಲಾಮಂದಿರದಲ್ಲಿ ಗಡಿನಾಡು ಸಾಹಿತ್ಯ ಮತ್ತು ಸಂಸ್ಕೃತಿ ಸಮ್ಮೇಳನ ಆಯೋಜಿಸಲಾಗಿದೆ.

ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಾಹಿತಿ ಕೆ.ಎಲ್. ಕುಂದರಗಿ ಅಧ್ಯಕ್ಷತೆ ವಹಿಸುವರು. ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉದ್ಘಾಟಿಸುವರು. ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಅಭಯ ಪಾಟೀಲ, ಚಲನಚಿತ್ರ ಕಲಾವಿದೆ ಅಂಜಲಿ ಕಾಂಬಳೆ ಭಾಗವಹಿಸುವರು. ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬಳಿಕ ಮಾಧ್ಯಮ, ಗಡಿನಾಡು ಸಾಹಿತ್ಯ ಮತ್ತು ಸಂಸ್ಕೃತಿ ಬಗ್ಗೆ ಹಾಗೂ ಮನೋಸ್ವಾಸ್ಥ್ಯ ಮತ್ತು ಸಂಗೀತ, ವಚನ ಸಾಹಿತ್ಯ ಗೋಷ್ಠಿಗಳು ನಡೆಯಲಿವೆ. ಸಂಗೀತ, ನೃತ್ಯ, ನಾಟಕ, ಹಾಸ್ಯ ಕಾರ್ಯಕ್ರಮಗಳು ಜರುಗಲಿವೆ.

ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಹಿರಿಯ ಸಾಹಿತಿ ಬಸವರಾಜ ಸಾದರ, ಕೆ. ರವೀಂದ್ರನಾಥ, ಶಾಸಕರಾದ ಅನಿಲ ಬೆನಕೆ, ಲಕ್ಷ್ಮಿ ಹೆಬ್ಬಾಳಕರ, ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಶಶಿಕಾಂತ ನಾಯಿಕ, ಡಿಸಿಪಿ ಯಶೋದ ವಂಟಗೋಡಿ, ಮರಾಠಿ ಚಲನಚಿತ್ರ ನಟಿ ನಿಶಿಗಂಧಾ ಕಾನೂರಕರ ಪಾಲ್ಗೊಳ್ಳುವರು. ಧಾರವಾಡ ಮುರಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಅಭಿನಂದಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.