ಶನಿವಾರ, ಜನವರಿ 23, 2021
18 °C

ಬಾಳಾಸಾಹೇಬಗೆ ಗಳಗನಾಥ ಸಾಹಿತ್ಯ, ಹನುಮಾಕ್ಷಿಗೆ ರಾಜಪುರೋಹಿತ ಸಂಶೋಧಕ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಹಾವೇರಿಯ ಗಳಗನಾಥ ಮತ್ತು ನಾ.ಶ್ರೀ. ರಾಜಪುರೋಹಿತ ಪ್ರತಿಷ್ಠಾನದಿಂದ ನೀಡುವ 2019ನೇ ಸಾಲಿನ ‘ಗಳಗನಾಥ ಸಾಹಿತ್ಯ’ ಪ್ರಶಸ್ತಿಗೆ  ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಾಳಾಸಾಹೇಬ ಲೋಕಾಪುರ ಹಾಗೂ ನಾ.ಶ್ರೀ. ರಾಜಪುರೋಹಿತ ಸಂಶೋಧಕ ಪ್ರಶಸ್ತಿಗೆ ಡಾ.ಹನುಮಾಕ್ಷಿ ಗೋಗಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ ₹ 50ಸಾವಿರ ಹಾಗೂ ಸ್ಮರಣಿಕೆ ಒಳಗೊಂಡಿದೆ.

‘ಇಲ್ಲಿನ ಬಸವರಾಜ ಕಟ್ಟೀಮನಿ ಸಭಾಭವನದಲ್ಲಿ ಜ.5ರಂದು ಬೆಳಿಗ್ಗೆ 11ಕ್ಕೆ ನಡೆಯುವ ಸಮಾರಂಭದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಪ್ರದಾನ ಮಾಡುವರು. ‘ರಂಗ ಸಂಪದ’ದ ಅಧ್ಯಕ್ಷ ಡಾ.ಅರವಿಂದ ವಿ. ಕುಲಕರ್ಣಿ ಉದ್ಘಾಟಿಸುವರು. ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾ.ವೆಂಕಟಗಿರಿ ದಳವಾಯಿ ಮತ್ತು ನಿವೃತ್ತ ಪ್ರಾಚಾರ್ಯೆ ಡಾ.ಸ್ಮಿತಾ ಸುರೇಬಾನಕರ ಪ್ರಶಸ್ತಿ ಪುರಸ್ಕೃತರ ಕುರಿತು ಮಾತನಾಡುವರು. ಸಾಹಿತಿ ಪ್ರೊ.ಮಾಲತಿ ಪಟ್ಟಣಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು’ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ದುಶ್ಯಂತ ನಾಡಗೌಡ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು