ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಟಗಾರಿಕೆ ಕಾಲೇಜು: ಗಾಂಧಿ ಜಯಂತಿ ಆಚರಣೆ 

Last Updated 3 ಅಕ್ಟೋಬರ್ 2021, 3:17 IST
ಅಕ್ಷರ ಗಾತ್ರ

ಮೂಡಲಗಿ: ತಾಲ್ಲೂಕಿನ ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಶನಿವಾರ ಮಹಾತ್ಮ ಗಾಂಧಿ ಮತ್ತು ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು.

ಮಹಾವಿದ್ಯಾಲಯದ ಡೀನ್‌ ಡಾ. ಎಂ.ಜಿ. ಕೊರಟಗಿ ಜಯಂತ್ಯುತ್ಸವಕ್ಕೆ ಚಾಲನೆ ನೀಡಿದರು. ಗಾಂಧಿ ಮತ್ತು ಶಾಸ್ತ್ರೀಜಿಯವರ ಆದರ್ಶಗಳನ್ನು ತಿಳಿಸಿದರು. ರಾಜ್ಯ ಮಟ್ಟದ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಭಾಗವಹಿಸಿದ್ದ ಅನನ್ಯ ಗುತ್ತೇದಾರ ಅವರನ್ನು ಸನ್ಮಾನಿಸಿದರು.

ಕಾರ್ಯಕ್ರಮದ ಪೂರ್ವದಲ್ಲಿ ಆವರಣದಲ್ಲಿ ಎನ್‌ಎಸ್‌ಎಸ್‌ ಸ್ವಯಂ ಸೇವಕರು ಸ್ವಚ್ಛತೆ ಮಾಡಿದರು.

ಎನ್‌ಎಸ್‌ಎಸ್‌ ಯೋಜನಾಧಿಕಾರಿ ಡಾ. ಮುಕುಂದ ಶಿರಗೂರ, ಡಾ. ಪುಷ್ಪ ಟಿ.ಎನ್, ಡಾ. ವಿ.ಟಿ. ರಾಠೋಡ ಇದ್ದರು. ವಿದ್ಯಾರ್ಥಿಗಳಾದ ಕಾವ್ಯಾ, ಸೃಷ್ಟಿ, ಶಿವಾನಂದ ಇವರು ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT