ಸೋಮವಾರ, ನವೆಂಬರ್ 29, 2021
20 °C

ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲುತೂರಾಟ: 15 ಮಂದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಶಿವಾಜಿ ನಗರ, ವೀರಭದ್ರನಗರದಲ್ಲಿ ಭಾನುವಾರ ರಾತ್ರಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದ ಘಟನೆಗೆ ಸಂಬಂಧಿಸಿದಂತೆ 15 ಮಂದಿ ಆರೋಪಿಗಳನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಯಿಮಂದಿರ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು, ಇಟ್ಟಿಗೆ, ಗಾಜಿನ ಬಾಟಲಿಗಳನ್ನು ತೂರಲಾಗಿತ್ತು. ಇದರಿಂದ ಏಳು ಮಂದಿ ಗಾಯಗೊಂಡಿದ್ದರು. ಹಲವು ವಾಹನಗಳು ಜಖಂಗೊಂಡಿದ್ದವು.

ನಗರದ ವಿವಿಧೆಡೆ ಮೂರ್ತಿಗಳ ಮೆರವಣಿಗೆ ಈಗಲೂ ಮುಂದುವರಿದಿದೆ. ಜಿಲ್ಲಾ ಪಂಚಾಯ್ತಿ ಕಟ್ಟಡದ ಬಳಿಯ ರಸ್ತೆಯಲ್ಲಿ ಎರಡು ಗಣೇಶ ಮಂಡಳಗಳವರ ನಡುವೆ ಘರ್ಷಣೆ ನಡೆದಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರು ಲಾಠಿ ಬೀಸಿ ಗುಂಪನ್ನು ಚದುರಿಸಿದರು. ಇದಾದ ಕೆಲವು ಹೊತ್ತಿನಲ್ಲಿ ಮೆರವಣಿಗೆ ಪುನರಾರಂಭಗೊಂಡಿದೆ.

ವಿವಿಧ ಬಡಾವಣೆಗಳಲ್ಲಿ ಪ್ರತಿಷ್ಠಾಪಿಸಿರುವ ಮೂರ್ತಿಗಳನ್ನು, ಮಂಡಳದವರು ಮೆರವಣಿಗೆಗೆ ತರುತ್ತಾರೆ. ಕೆಲವರು ತಮ್ಮ ಮಂಡಳಿಯ ಮೂರ್ತಿಯನ್ನು ಕೊನೆಯದಾಗಿ ವಿಸರ್ಜಿಸಬೇಕು ಎಂದು ನಿಧಾನವಾಗಿ ಮೆರವಣಿಗೆಯಲ್ಲಿ ತೆರಳುತ್ತಾರೆ. ಇದು ಪೊಲೀಸರ ತಲೆ ನೋವಿಗೆ ಕಾರಣವಾಗಿದೆ.

ಮೆರವಣಿಗೆ ಮಾರ್ಗದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು