ಶುಕ್ರವಾರ, ಡಿಸೆಂಬರ್ 4, 2020
24 °C

ಸಾಮೂಹಿಕ ಅತ್ಯಾಚಾರ: ಐವರಿಗೆ ಜೀವಾವಧಿ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬಾಲಕಿ ಮೇಲೆ 2017ರ ಫೆಬ್ರುವರಿಯಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಐವರು ಅಪರಾಧಿಗಳಿಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ಮತ್ತು ಪೋಕ್ಸೊ ನ್ಯಾಯಾಲಯವು, ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.

1 ಮತ್ತು 2ನೇ ಆರೋಪಿಗಳಿಗೆ ತಲಾ ₹ 5.21 ಲಕ್ಷ, 3 ಹಾಗೂ 4ನೇ ಆರೋಪಿಗಳಿಗೆ ತಲಾ ₹ 5.11 ಲಕ್ಷ ಮತ್ತು 5ನೇ ಆರೋಪಿಗೆ ₹ 5.06 ಲಕ್ಷ ದಂಡ ವಿಧಿಸಿ ನ್ಯಾಯಾದೀಶರು ಆದೇಶಿಸಿದ್ದಾರೆ.

ತನಿಖಾಧಿಕಾರಿ ರಮೇಶ ಬಿ. ಗೋಕಾಕ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ ಶಿಕ್ಷೆ ವಿಧಿಸಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕ ವಿ.ಎಲ್. ಪಾಟೀಲ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು