ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಟ್ಟಿ ಬಸವಣ್ಣ ಯೋಜನೆಗೆ ಅನುಮೋದನೆ

Last Updated 12 ನವೆಂಬರ್ 2020, 12:07 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಗೋಕಾಕ ನಗರ ಮತ್ತು ಸುತ್ತುಮುತ್ತಲಿನ ಹಳ್ಳಿಗಳ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ ಗಟ್ಟಿ ಬಸವಣ್ಣ ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.

₹ 995 ಕೋಟಿ ವೆಚ್ಚದಲ್ಲಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಿ ಗೋಕಾಕ ತಾಲ್ಲೂಕಿನ ಜನರಿಗೆ ಕುಡಿಯುವ ನೀರು ಒದಗಿಸುವ ಜಲ ಸಚಿವ ರಮೇಶ ಜಾರಕಿಹೊಳಿ‌ ಅವರ ಕನಸಿನ ಯೋಜನೆ ಅನುಷ್ಠಾನಕ್ಕೆ ಸಂಪುಟ ಅನುಮತಿ ನೀಡಿದೆ. ಆ ತಾಲ್ಲೂಕಿನ ಸುತ್ತಮುತ್ತ ಅಂತರ್ಜಲ ಮಟ್ಟ ತೀವ್ರ ಕುಸಿದಿದ್ದು, ಗಟ್ಟಿ ಬಸವಣ್ಣ ಯೋಜನೆ ಅನುಷ್ಠಾನದಿಂದ ಅನುಕೂಲವಾಗಲಿದೆ.

ಬಿಜೆಪಿಗೆ ಕಚೇರಿ ನಿರ್ಮಾಣಕ್ಕೆ ಜಾಗ:ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಕಚೇರಿ ನಿರ್ಮಾಣಕ್ಕಾಗಿ 30 ಗುಂಟೆ ಜಾಗ ನೀಡಲು ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ.

‘ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ‌ ಅವರ ಪ್ರಯತ್ನದ ಫಲವಾಗಿ ನಗರಾಭಿವೃದ್ಧಿ ಇಲಾಖೆಯ ಪ್ರಸ್ತಾವವನ್ನು ಸಚಿವ ಸಂಪುಟ ಒಪ್ಪಿದೆ. ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿಯ ಸ್ವಂತ ಕಟ್ಟಡ ಇರಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸೂಚನೆಯಂತೆ ಸಂಪುಟದಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಚಿವ ರಮೇಶ, ಮುಖ್ಯಮಂತ್ರಿ ತ್ತು ಇತರ ಸಚಿವರೊಂದಿಗೆ ಚರ್ಚಿಸಿ ಜಾಗ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.

‘ನಮ್ಮದೇ ಆದ ಸ್ವಂತ ಕಚೇರಿ ಇರಬೇಕು ಎನ್ನುವುದು ಕಾರ್ಯಕರ್ತರ ಬಹು ದಿನಗಳ ಆಸೆಯಾಗಿತ್ತು. ಈಗ ಆ ಆಸೆ ಈಡೇರುತ್ತಿರುವುದು ಸಂತಸ ತಂದಿದೆ. ಧರ್ಮನಾಥ ಭವನದ ಹಿಂದಿರುವ 30 ಗುಂಟೆ ಭೂಮಿ ಸಿಗುತ್ತಿದೆ. ಜಿಲ್ಲೆಯ ಎಲ್ಲ ಸಚಿವರು ಹಾಗೂ ಶಾಸಕರ ಸಹಕಾರದಿಂದ ಈ ಕೆಲಸ ನಡೆದಿದೆ. ಶೀಘ್ರವೇ ಅಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭವಾಗಲಿದೆ’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT