ಘಟಪ್ರಭಾ (ಗೋಕಾಕ): ಗ್ರಾಮೀಣ ಮಟ್ಟದಲ್ಲಿ ಆರೋಗ್ಯ ಸೇವೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಜೆ.ಜಿ. ಸಹಕಾರ ಸೊಸೈಟಿಯ ಆಸ್ಪತ್ರೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಕೆ.ಎಚ್. ಪಾಟೀಲ ಹೇಳಿದರು.

ಗುರುವಾರ ಇಲ್ಲಿನ ಜೆ.ಜಿ. ಸಹಕಾರ ಸೊಸೈಟಿ ಆಸ್ಪತ್ರೆಯಿಂದ ಆಚರಿಸಲಾಗುತ್ತಿರುವ ‘ಅಮೃತ ಮಹೋತ್ಸವ ಪರ್ವ 2026’ ಅಂಗವಾಗಿ ಪಂಚಕರ್ಮ ವಿಭಾಗದ ಸಹಯೋಗದಲ್ಲಿ 75 ಆಶಾ ಕಾರ್ಯಕರ್ತೆಯರಿಗೆ ‘ಸಾಮಾನ್ಯ ರೋಗಿಗಳಿಗೆ ಮನೆಮದ್ದುಗಳು’ ಕುರಿತ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮನೆ ಮದ್ದುಗಳ ಮೂಲಕ ಪ್ರಾಥಮಿಕ ಮಟ್ಟದಲ್ಲಿ ರೋಗ ನಿಯಂತ್ರಣ ಹಾಗೂ ಜನಜಾಗೃತಿ ಮೂಡಿಸುವಲ್ಲಿ ಇವರ ಪಾತ್ರ ಮಹತ್ವದ್ದಾಗಿದೆ. ಇಂತಹ ತರಬೇತಿಗಳು ಅವರ ಕಾರ್ಯಕ್ಷಮತೆಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತವೆ ಎಂದು ವಿಶ್ಲೇಷಿಸಿದರು.

ಪಂಚಕರ್ಮ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದೀಪಾ ಪಾಟೀಲ ಮಾತನಾಡಿ, ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಜ್ವರ, ಶೀತ, ಕೆಮ್ಮು, ಅಜೀರ್ಣ, ಚರ್ಮರೋಗಗಳು ಮುಂತಾದ ಸಮಸ್ಯೆಗಳಿಗೆ ಸರಳ ಮತ್ತು ಪರಿಣಾಮಕಾರಿ ಮನೆಮದ್ದುಗಳ ಬಗ್ಗೆ ತಿಳಿಸಿಕೊಟ್ಟರು. ಆಯುರ್ವೇದ ತತ್ವಗಳ ಆಧಾರದ ಮೇಲೆ ಮನೆಮದ್ದುಗಳನ್ನು ಸರಿಯಾದ ವಿಧಾನದಲ್ಲಿ ಬಳಸುವ ಬಗ್ಗೆ ಹಾಗೂ ಅದರ ಪ್ರಯೋಜನಗಳನ್ನು ತಿಳಿಸಿ, ಕಾರ್ಯಕರ್ತೆಯರಿಗೆ ಪ್ರಾಯೋಗಿಕ ಪ್ರಾತ್ಯಕ್ಷಿಕೆಗಳ ಮೂಲಕ ಮಾಹಿತಿ ನೀಡಿದರು.

ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಜೆ. ಕೆ. ಶರ್ಮಾ, ಪಂಚಕರ್ಮ ವಿಭಾಗದ ಮುಖ್ಯಸ್ಥ ಡಾ. ಅನಿಲ ಮನಗೂಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-21-567985619

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.