ಘಟಪ್ರಭಾ (ಗೋಕಾಕ): ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಲ್ಲಿ ಕಳೆದ ಒಂದು ತಿಂಗಳಿನಿಂದ ಗ್ಯಾಸ್ ವಿತರಣೆಯಲ್ಲಿ ಆಗುತ್ತಿರುವ ಅನಗತ್ಯ ವಿಳಂಬ ಖಂಡಿಸಿ ಗ್ಯಾಸ್ ವಿತರಣಾ ಏಜೆನ್ಸಿ ವಿರುದ್ಧ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಸ್ಥಳೀಯ ಮೃತ್ಯುಂಜಯ ವೃತ್ತದಲ್ಲಿ ಸೋಮವಾಋ ಪ್ರತಿಭಟನೆ ನಡೆಸಲಾಯಿತು. ಗ್ರಾಮ ಲೆಕ್ಕಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಾ. ಕೆಂಪಣ್ಣ ಚೌಕಶಿ ಮಾತನಾಡಿ, ‘ಅಡುಗೆ ಅನಿಲ (ಗ್ಯಾಸ್) ವಿತರಣೆಯಲ್ಲಿ ಆಗುತ್ತಿರುವ ಅನಗತ್ಯ ವಿಳಂಬದಿಂದಾಗಿ ಉಭಯ ತಾಲ್ಲೂಕುಗಳಾದ್ಯಂತ ಜನಸಾಮಾನ್ಯರು, ಹೋಟೆಲ್ ಉದ್ಯಮಿಗಳು, ಆಟೊ ಚಾಲಕರು, ಬೀದಿಬದಿ ವ್ಯಾಪಾರಿಗಳು ತೊಂದರೆ ಆನುಭವಿಸುತ್ತಿದ್ದಾರೆ’ ಎಂದರು.

‘ಕೆಲ ಗ್ಯಾಸ್ ವಿತರಕರು ನಿಗದಿತ ಬೆಲೆಗಿಂತ ಹೆಚ್ಚು ಹಣ ಪಡೆಯುತ್ತಿದ್ದು. ಇಂಥವರ ಪರವಾನಗಿ ರದ್ದುಗೊಳಿಸಬೇಕು. ಆದಷ್ಟು ಬೇಗ ಎಲ್ಲ ಸಮಸ್ಯೆಗಳನ್ನು ಇತ್ಯರ್ಥಗೊಳಿಸಿ ನಾಗರಿಕರು ನೆಮ್ಮದಿಯ ಜೀವನ ಸಾಗಿಸುವಂತೆ ಅನುಕೂಲ ಮಾಡಿಕೊಡಬೇಕು’ ಎಂದು ಒತ್ತಾಸಿದರು.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರೆಹಮಾನ ಮೊಕಾಶಿ ಮಾತನಾಡಿ, ‘ಆರು ದಿನಗಳ ಒಳಗೆ ಈ ಸಮಸ್ಯೆ ಬಗೆಹರಿಯದಿದ್ದರೆ ಸಂಘಟನೆಯಿಂದ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಮುರಕುಂಬಿ, ಉಸ್ತುವಾರಿ ಅಧ್ಯಕ್ಷ ಪ್ರಶಾಂತ ಅರಳಿಕಟ್ಟಿ, ಕಾರ್ಯಾಧ್ಯಕ್ಷ ಶೆಟ್ಟೆಪ್ಪಾ ಗಾಡಿವಡ್ಡರ, ಮಂಜುನಾಥ ಜೆಲ್ಲಿ, ಸಂಚಾಲಕ ರವಿ ನಾವಿ, ತಮ್ಮಣ್ಣಾ ಅರಭಾಂವಿ, ಲಕ್ಷ್ಮೀ ಹಾದಿಮನಿ, ಶಶಿ ಚೌಕಶಿ, ರಾಘವೇಂದ್ರ ಕುಡ್ಡೆಮ್ಮಿ, ಸಿದ್ದಪ್ಪ ಬನ್ನೆನ್ನವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-21-1577513766

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.