ಘಟಪ್ರಭಾ (ಗೋಕಾಕ): ಇಲ್ಲಿನ ಜೆ.ಜಿ. ಸಹಕಾರ ಸಂಸ್ಥೆ ಆಸ್ಪತ್ರೆಯ ಅಮೃತ ಮಹೋತ್ಸವ ಪರ್ವದ ನಿಮಿತ್ತ ಕಾರ್ಮಿಕ ದಿನಾಚರಣೆ ಅಂಗವಾಗಿ ಸಂಸ್ಥೆಯ ಸೇವೆಯಿಂದ ನಿವೃತ್ತಿ ಹೊಂದಿದ ಸಿಬ್ಬಂದಿಯನ್ನು ಗೌರವಿಸುವ ವಿಶೇಷ ಸನ್ಮಾನ ಕಾರ್ಯಕ್ರಮ ಈಚೆಗೆ ಜರುಗಿತು. ಕರ್ತವ್ಯ ನಿರ್ವಹಿಸುವ ವೇಳೆ ಮೃತರಾದ ಸಿಬ್ಬಂದಿಯ ಸೇವೆ ಸ್ಮರಿಸಲಾಯಿತು.

ಕಾರ್ಮಿಕ ಇಲಾಖೆಯ ಉಪ ಆಯುಕ್ತ ಡಿ.ಜಿ. ನಾಗೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ ಜೋಗೂರ ಪಾಲ್ಗೊಂಡಿದ್ದರು.

ಸಾನ್ನಿಧ್ಯ ವಹಿಸಿದ್ದ ಇಲ್ಲಿನ ಗುಬ್ಬಲಗುಡ್ಡದ ಕೆಂಪಯ್ಯಸ್ವಾಮಿ ಮಠದ ಪೀಠಾಧಿಪತಿ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ‘ಸಂಸ್ಥೆಯ ಬೆಳವಣಿಗೆಯಲ್ಲಿ ನಿವೃತ್ತ ಹಾಗೂ ವಿಧಿವಶವರಾದ ಸಿಬ್ಬಂದಿಯ ಸೇವೆ ಅಮೂಲ್ಯವಾಗಿದೆ. ಇಂತಹ ಸನ್ಮಾನ ಕಾರ್ಯಕ್ರಮಗಳು ಅವರ ತ್ಯಾಗ ಮತ್ತು ಶ್ರಮವನ್ನು ಗೌರವಿಸುವ ಉತ್ತಮ ಪ್ರಯತ್ನವಾಗಿದೆ’ ಎಂದು ಅರ್ಥೈಸಿದರು.

ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಕೆ.ಎಚ್. ಪಾಟೀಲ ಅವರು ಸಂಸ್ಥೆ ನಡೆದು ಬಂದ ದಾರಿಯನ್ನು ಸ್ಮರಿಸಿದರು.

75 ನಿವೃತ್ತ ಸಿಬ್ಬಂದಿ ಸನ್ಮಾನಿಸಲಾಯಿತು. ಕರ್ತವ್ಯದ ವೇಳೆ ವಿಧಿವಶರಾದ ಸಿಬ್ಬಂದಿಯ ಕುಟುಂಬದವರನ್ನು ವೇದಿಕೆಗೆ ಆಹ್ವಾನಿಸಿ ಗೌರವಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎ.ಎಸ್. ಬಡಕುಂದ್ರಿ, ಉಪಾಧ್ಯಕ್ಷ ಅನಿಲ ನೇರ್ಲಿ, ಆಡಳಿತ ಮಂಡಳಿ ನಿರ್ದೇಶಕರು ಇದ್ದರು. ಸಂಸ್ಥೆಯ ವ್ಯವಸ್ಥಾಪಕ ವಿಠ್ಠಲ ಕೌಜಲಗಿ ಸ್ವಾಗತಿಸಿದರು. ಪ್ರಾಧ್ಯಾಪಕ ಡಾ. ರಾಜಶೇಖರ ಜಕಾತಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ಕಲ್ಲಪ್ಪ ಸೊಲ್ಲಾಪುರೆ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-21-2062447357

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.