ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೂಡಲಗಿ: ಘಟಪ್ರಭಾ ಎಡ, ಬಲದಂಡೆ ವ್ಯಾಪ್ತಿ ರೈತರಿಗೆ ನೀರು 

ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
Last Updated 2 ಏಪ್ರಿಲ್ 2023, 7:15 IST
ಅಕ್ಷರ ಗಾತ್ರ

ಮೂಡಲಗಿ: ‘ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡಲಾಗುತ್ತಿದೆ’ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಇತ್ತಿಚೆಗೆ ಮೂಡಲಗಿ ತಾಲ್ಲೂಕಿನ ತುಕ್ಕಾನಟ್ಟಿಯಲ್ಲಿ ತುಕ್ಕಾನಟ್ಟಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

‘ರೈತರ ಹಿತಾಸಕ್ತಿಗೆ ಅನುಗುಣವಾಗಿ ಕೃಷಿ ಚಟುವಟಿಕೆಗಳು ಮತ್ತು ಕುಡಿಯುವ ನೀರಿನ ಉದ್ದೇಶಗಳಿಗಾಗಿ ಪ್ರತಿ ಏಪ್ರಿಲ್‌ ತಿಂಗಳ ಕೊನೆಯತನಕ ಕಾಲುವೆಗಳಿಗೆ ನೀರನ್ನು ಹರಿಸಲಾಗುವುದು’ ಎಂದು ಹೇಳಿದರು.

ಟಿಎಪಿಸಿಎಂಎಸ್ ಉಪಾಧ್ಯಕ್ಷ ವಿಠ್ಠಲ ಪಾಟೀಲ, ಬೆಂಗಳೂರು ಎಸ್ಎಲ್‌ಡಿಪಿ ನಿರ್ದೇಶಕ ರಾಜು ಬೈರುಗೋಳ, ಘಯೋನೀ ಮಹಾಮಂಡಳ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ನಿರ್ದೆಶಕ ಬಸವರಾಜ ಪಂಡ್ರೊಳ್ಳಿ, ಪ್ರಭಾಶುಗರ ನಿರ್ದೇಶಕರಾದ ಲಕ್ಷ್ಮಣ ಗಣಪ್ಪಗೋಳ, ಶಿವಲಿಂಗ ಪೂಜೇರಿ, ಮಾಳಪ್ಪ ಜಾಗನೂರ, ಮುಖಂಡರಾದ ಸಿದ್ದಪ್ಪ ಹಮ್ಮನ್ನವರ, ಶಿವಪ್ಪ ಮರ್ದಿ, ಶಿವಮೂರ್ತಿ ಹುಕ್ಕೇರಿ, ಕಲ್ಲಪ್ಪ ಚೌಕಾಶಿ, ವಾಸಪ್ಪ ಪಂಡ್ರೊಳ್ಳಿ, ರಾಮಚಂದ್ರ ಪಾಟೀಲ, ಶಿವು ಕಮತಿ, ಮಹಾದೇವ ತುಕ್ಕಾನಟ್ಟಿ, ಶ್ರೀಪತಿ ಗಣೇಶವಾಡಿ, ರಾಮಕೃಷ್ಣ ಹೊರಟ್ಟಿ, ಶಂಕರ ಕಮತಿ, ಬೈರು ಯಕ್ಕುಂಡಿ, ಶಿವು ಕುಡ್ಡೆಮ್ಮಿ, ಅಜ್ಜಪ್ಪ ಮನ್ನಿಕೇರಿ, ಕುಮಾರ ಮರ್ದಿ, ಗುರುನಾಥ ಹುಕ್ಕೇರಿ, ಸತ್ತೆಪ್ಪ ಮಲ್ಲಾಪೂರ, ಗಂಗಾಧರ ಗುಡಗುಡಿ, ಯಲ್ಲವ್ವ ಚಿಗಡೊಳ್ಳಿ, ಸುನಂದಾ ಭಜಂತ್ರಿ, ಗುರುನಾಥ ಕಂಕಣವಾಡಿ, ಸಾಗರ ಬಾಗೇವಾಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT