ಬೆಳಗಾವಿ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕಾನೂನು ಸಂಘರ್ಷಕ್ಕೆ ಒಳಪಟ್ಟ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪರಾರಿಯಾದ ಮತ್ತೊಬ್ಬ ಆರೋಪಿ ಬಂಧನಕ್ಕೆ ಜಾಲ ಬೀಸಿದ್ದೇವೆ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಬೊರಸೆ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಎಪಿಎಂಸಿ ಠಾಣೆಯಲ್ಲಿ 6 ಮಂದಿ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿತ್ತು. ಅದಾದ 24 ತಾಸಿನೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿಗಳು ಬೆಳಗಾವಿ ಜಿಲ್ಲೆಯವರೇ ಆಗಿದ್ದಾರೆ’ ಎಂದರು.

‘ಆರಂಭದಲ್ಲಿ ಒಬ್ಬನು ಬಾಲಕಿ ಪರಿಚಯಿಸಿಕೊಂಡು, ಸ್ನೇಹ ಬೆಳೆಸುತ್ತಾನೆ. ಬಳಿಕ ಆತ ಮತ್ತು ಸ್ನೇಹಿತರು 2024ರ ಡಿಸೆಂಬರ್ನಲ್ಲಿ ಪುಸಲಾಯಿಸಿಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರದ ದೃಶ್ಯವನ್ನು ಆರೋಪಿಗಳು ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಅದನ್ನೇ ತೋರಿಸಿ ಬ್ಲ್ಯಾಕ್ಮೇಲ್ ಮಾಡಿ, 2025ರ ಜನವರಿಯಲ್ಲಿ ಮತ್ತೆ ಮೂವರು ಅತ್ಯಾಚಾರ ಮಾಡಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರ ಮಾಡಲಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.

‘ಬೆಳಗಾವಿ ತಾಲ್ಲೂಕಿನ ಸಂತಿಬಸ್ತವಾಡದಲ್ಲಿ ಕುರ್ಆನ್ ಸುಟ್ಟ ಪ್ರಕರಣದ ಸೂಕ್ಷ್ಮತೆ ಅರಿತು, ಅದನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಅವರಿಗೆ ತನಿಖೆಗೆ ಸ್ಥಳೀಯ ಪೊಲೀಸರು ಸಹಕಾರ ನೀಡುತ್ತಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.