ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ಮಾದರಿಯಲ್ಲಿ ಪರಿಹಾರಕ್ಕೆ ಸತೀಶ‌ ಜಾರಕಿಹೊಳಿ ಆಗ್ರಹ

Last Updated 10 ಮೇ 2021, 12:12 IST
ಅಕ್ಷರ ಗಾತ್ರ

ಬೆಳಗಾವಿ: ‘ಲಾಕ್‌ಡೌನ್‌ನಿಂದ ಬಡ ಜನರಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಹೀಗಾಗಿ, ತಮಿಳುನಾಡು ಮಾದರಿಯಲ್ಲಿ ರಾಜ್ಯ ಸರ್ಕಾರವೂ ಬಡವರಿಗೆ ಪರಿಹಾರ ಕೊಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ‌ ಜಾರಕಿಹೊಳಿ ಆಗ್ರಹಿಸಿದರು.

ನಗರದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ತಮಿಳುನಾಡು ಸರ್ಕಾರವು ಅಲ್ಲಿನ ಬಡವರಿಗೆ ₹ 4 ಸಾವಿರ ಪರಿಹಾರ ನೀಡಿದೆ. ನಮ್ಮಲ್ಲೂ ಕನಿಷ್ಠ ತಿಂಗಳ ಮಟ್ಟಿಗಾದರೂ ಪರಿಹಾರ ನೀಡಿದರೆ ಅನಕೂಲವಾಗುತ್ತದೆ’ ಎಂದರು.

‘ಜಿಲ್ಲೆಗೆ ಆಮ್ಲಜನಕ ಪೂರೈಕೆಯಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ. ಜನಸಂಖ್ಯೆ ಆಧಾರದ ಮೇಲೆ ಬೆಳಗಾವಿಗೆ ಹೆಚ್ಚು ಆಮ್ಲಜನಕ ಮತ್ತು ಲಸಿಕೆ ಸರಬರಾಜು ಮಾಡುವ ಅಗತ್ಯವಿದೆ. ಜಿಲ್ಲಾ‌ ಉಸ್ತುವಾರಿ ಸಚಿವರು ಕೂಡಲೇ ಜನಪ್ರತಿನಿಧಿಗಳ ಸಭೆ ಕರೆಯಬೇಕು. ಅಗತ್ಯ ಸಹಕಾರ ಮತ್ತು ಸಲಹೆ ಕೊಡಲು ಸಿದ್ಧರಿದ್ದೇವೆ’ ಎಂದು ಹೇಳಿದರು.

‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆಯಾಗಿದ್ದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮತ್ತೆ ಬಂದು ಅಧಿಕಾರ ವಹಿಸಿಕೊಂಡಿದ್ದಾರೆ. ಸಮಸ್ಯೆಗಳನ್ನು ಸರಿಪಡಿಸಲು ಅವರಿಗೆ ಸ್ವಲ್ಪ ಕಾಲಾವಕಾಶ ಕೊಡುತ್ತೇವೆ. ಕೊರೊನಾ ನಿಯಂತ್ರಣಕ್ಕೆ ಜನರು ಕೂಡ ಕೈಜೋಡಿಸಬೇಕು’ ಎಂದರು.

‘ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಹಾಗೂ ಶವ ಸಂಸ್ಕಾರ ಆಗುತ್ತಿರುವುದಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೇವೆ. ಜಿಲ್ಲೆಯಲ್ಲಿ ಆಮ್ಲಜನಕ ಉತ್ಪಾದನೆ ಸಾಮರ್ಥ್ಯವಿದ್ದರೂ ಅದಕ್ಕೆ ಕಾಲಾವಕಾಶ ಬೇಕಾಗುತ್ತದೆ. ಸದ್ಯಕ್ಕೆ ಇರುವ ಕಡೆಯಿಂದ ತರಿಸಿಕೊಳ್ಳುವುದು ಸೂಕ್ತ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT