ಪ್ರವಾಹ, ಕೊರೊನಾ ತಡೆಗೆ ಆದ್ಯತೆ ಕೊಡಿ

ಗೋಕಾಕ: ಪ್ರವಾಹ ಮತ್ತು ಕೊರೊನಾ ತಡೆಗೆ ಪ್ರಥಮ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಸೂಚಿಸಿದರು.
ಸೋಮವಾರ ಗೃಹ ಕಚೇರಿಯಲ್ಲಿ ಜರುಗಿದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪ್ರವಾಹದಲ್ಲಿ ಮುಳುಗಡೆಯಾಗುವ ಜಮೀನುಗಳಿಗೆ ಯಾವುದೇ ತೊಂದರೆ ಆಗದಂತೆ ನೀರಾವರಿ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ ಹಾಗೂ ಇತರೇ ಇಲಾಖೆಗಳ ಅಧಿಕಾರಿಗಳು ತಾಲ್ಲೂಕು ಆಡಳಿತದ ಜೊತೆಗೆ ನಿರಂತರ ಸಂಪರ್ಕ ಇಟ್ಟುಕೊಂಡು ಪರಿಹಾರ ಕಾರ್ಯಗಳಿಗೆ ಕೈ ಜೋಡಿಸಿ ಕಾರ್ಯಮಾಡಿದಾಗ ಮಾತ್ರ ಸಂಭಾವ್ಯ ಪ್ರವಾಹ ಹಾಗೂ ಕೊರೊನಾದಂತಹ ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯ. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು’ ಎಂದು ಹೇಳಿದರು.
‘ತಾಲ್ಲೂಕಿನಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಬೀಜ ವಿತರಣೆಯಲ್ಲಿ ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡು, ಸೊಸೈಟಿಯಲ್ಲಿ ಬೀಜ ಮಾರಾಟಮಾಡದೇ ಕೃಷಿ ಇಲಾಖೆ ತೆರೆದಿರುವ ಬೀಜ ವಿತರಣಾ ಕೇಂದ್ರಗಳಿಂದಲೇ ಬೀಜ ಹಾಗೂ ಗೊಬ್ಬರ ವಿತರಣೆಯಾಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ತಾಲೂಕಿನಾದ್ಯಂತ ಇರುವ 2.14 ಲಕ್ಷ ಜಾನುವಾರುಗಳಿಗೆ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಔಷಧಿ ಹಾಗೂ ಲಸಿಕೆ ನೀಡಬೇಕು’ ಎಂದರು.
ಸಭೆಯಲ್ಲಿ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಪ್ರಭಾರ ಡಿವೈಎಸ್ಪಿ ಮನೋಜಕುಮಾರ ನಾಯಿಕ, ಪ್ರಭಾರ ಪೌರಾಯುಕ್ತ ಶಿವಾನಂದ ಹಿರೇಮಠ, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ, ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ಎಂ.ಎಲ್.ಜನ್ಮಟ್ಟಿ, ಸಹಾಯಕ ಕೃಷಿ ನಿರ್ದೇಶಕ ಎಂ.ಎಂ.ನದಾಫ್ ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.