ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಾನುವಾರುಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಿ’

Published 14 ಮಾರ್ಚ್ 2024, 5:42 IST
Last Updated 14 ಮಾರ್ಚ್ 2024, 5:42 IST
ಅಕ್ಷರ ಗಾತ್ರ

ಹಂದಿಗುಂದ: 'ಜಾನುವಾರುಗಳಿಗೆ ಸಕಾಲದಲ್ಲಿ ಚಿಕಿತ್ಸೆ ಸಿಗಬೇಕು. ಪಶು ಆಸ್ಪತ್ರೆಯ ಎಲ್ಲ ವೈದ್ಯರು ಸಾರ್ವಜನಿಕರು, ರೈತರು ಹೇಳಿದ ತಕ್ಷಣವೇ ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಮುಂದಾಗಬೇಕು’ ಎಂದು ಶಾಸಕ ಮಹೇಂದ್ರ ತಮ್ಮಣ್ಣವರ ಹೇಳಿದರು.

ಸಮೀಪದ ಹಿಡಕಲ್ಲದಲ್ಲಿ ಮಂಗಳವಾರ ಪಶು ಚಿಕಿತ್ಸಾಲಯ ಪ್ರಾರಂಭೋತ್ಸವದಲ್ಲಿ ಗೋ ಪೂಜೆ ಮಾಡಿ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮಪ್ಪ ಪಾರ್ಥನಳ್ಳಿ ಮಾತನಾಡಿ, ‘ಜನರ ಬಹುದಿನಗಳ ಬೇಡಿಕೆಯನ್ನು ಶಾಸಕ ಮಹೇಂದ್ರ ತಮ್ಮಣ್ಣವರ ಈಡೇರಿಸಿದ್ದಾರೆ. ಅವರಿಗೆ ಕೃತಜ್ಞರಾಗಿದ್ದೇವೆ’ ಎಂದರು.

ತಾಲ್ಲೂಕು ಮುಖ್ಯ ಪಶು ವೈದ್ಯಾಧಿಕಾರಿ ಸಚಿನ ಸೌಂದಲಗಿ, ತಾಲ್ಲೂಕು ವೈದ್ಯಾಧಿಕಾರಿ ಎಂ.ಬಿ.ಪಾಟೀಲ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಧಾ ಢವಳೇಶ್ವರ, ಡಾ.ಮನೋಹರ ಪತ್ತಾರ, ಡಾ.ಮಹಾವೀರ ಕಂಕಣವಾಡಿ, ಡಾ.ಎಚ್.ಟಿ.ನಾವಿ, ಡಾ.ಕೆ.ಎಲ್.ನಂದಾರ, ಡಾ.ವಸಂತ ಗಲಗಲಿ, ಡಾ.ಜಯಶ್ರೀ ತೇರದಾಳ, ಪಿಡಿಒ ಮಹಾದೇವ ಕುಂಬಾರ, ಪ್ರದೀಪ ಹಾಲ್ಗುಣಿ, ಸಚಿನ ಘಂಟಿ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಪಿ.ಎಂ.ದರೂರ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT