ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಧನೆ ಮಾಡಲು ಅಹಂಕಾರ ತ್ಯಜಿಸಿ: ಪಾಟೀಲ

Published 19 ಜೂನ್ 2024, 14:56 IST
Last Updated 19 ಜೂನ್ 2024, 14:56 IST
ಅಕ್ಷರ ಗಾತ್ರ

ಕಾಗವಾಡ: ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಹೊರಹಾಕಿದರೆ ಮಾತ್ರ ಇತರರಿಗೆ ಮಾದರಿಯಾಗುತ್ತಾರೆ. ಅವರು ಸರಿಯಾದ ದಿಶೆಯಲ್ಲಿ ಪ್ರಯತ್ನಿಸಿದರೆ ಸಾಧಕನಾಗಲು ಸಾಧ್ಯ ಎಂದು ಸದಲಗಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಎನ್.ಆರ್. ಪಾಟೀಲ ಹೇಳಿದರು.

ಇಲ್ಲಿನ ಶಿವಾನಂದ ಮಹಾವಿದ್ಯಾಲಯದಲ್ಲಿ ನಡೆದ 2022-23ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ವಿದ್ಯಾರ್ಥಿಗಳು ಹೆಚ್ಚಿನ ಶೈಕ್ಷಣಿಕ ಅಂಕಗಳನ್ನು ಪಡೆಯುವದರ ಜೊತೆಗೆ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್.ಎ. ಕರ್ಕಿ ಮಾತನಾಡಿ, ‘ಮಹಾವಿದ್ಯಾಲಯದ ಹಲವಾರು ವಿದ್ಯಾರ್ಥಿಗಳು ಅತ್ಯುನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದು ಮಹಾವಿದ್ಯಾಲಯಕ್ಕೆ ಹೆಮ್ಮೆಯ ವಿಷಯ. ಶಿಕ್ಷಕರು ಯಾವಾಗಲೂ ತಮ್ಮ ವಿದ್ಯಾರ್ಥಿಗಳ ಒಳ್ಳೆಯದಕ್ಕಾಗಿ ಪರಿಶ್ರಮ ಪಡುತ್ತಾರೆ’ ಎಂದರು.

ಯತೀಶ್ವರಾನಂದ ಸ್ವಾಮೀಜಿ ಸಾನ್ನಿಧ್ಯ ಆಶೀರ್ವಚನ ನೀಡಿದರು. ವಿದ್ಯಾರ್ಥಿ ಕಲ್ಯಾಣಾಧಿಕಾರಿ ಎಸ್.ಪಿ. ತಳವಾರ ಪ್ರಾಸ್ತಾವಿಕ ಮಾತನಾಡಿದರು. ಜೆ.ಕೆ.ಪಾಟೀಲ ಪ್ರತಿಭಾ ಪುರಸ್ಕಾರಗಳನ್ನು ವಿತರಿಸಿದರು.

ಆಡಳಿತ ಮಂಡಳಿ ಕಾರ್ಯದರ್ಶಿ ಪ್ರೊ.ಬಿ.ಎ. ಪಾಟೀಲ, ಪ್ರೊ.ಬಿ.ಡಿ. ಧಾಮಣ್ಣವರ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT