ಬೆಳಗಾವಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸವದತ್ತಿಯ ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡಕ್ಕೆ ಗುರುವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನ ಪಡೆದರು.

ಕೋವಿಡ್–19 ಕಾರಣದಿಂದ ಭಕ್ತರಿಗೆ ಪ್ರವೇಶಕ್ಕೆ ನಿಷೇಧಿಸಲಾಗಿದೆ. ಆದರೆ, ಗಣ್ಯವ್ಯಕ್ತಿಯಾದ್ದರಿಂದ ನೆರೆ ರಾಜ್ಯದ ಮುಖ್ಯಮಂತ್ರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು ಎಂದು ಮೂಲಗಳು ತಿಳಿಸಿವೆ.

ಅವರ ಭೇಟಿ ವೇಳೆ, ದೇವಸ್ಥಾನದ ಆವರಣಕ್ಕೆ ಸ್ಥಳೀಯ ಮಾಧ್ಯಮ ಪ್ರತಿನಿಧಿಗಳಿಗೆ ಪೊಲೀಸರು ಅವಕಾಶ ನೀಡಲಿಲ್ಲ. ಸಾವಂತ್ ಅವರಿಗೆ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಸಾಥ್ ನೀಡಿದರು.

ಮಹದಾಯಿ ನದಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ರೈತರು ಅಥವಾ ಕನ್ನಡ ಪರ ಸಂಘಟನೆ ಮುಖಂಡರು ಮುತ್ತಿಗೆ ಹಾಕುವ ಸಾಧ್ಯತೆ ಇದ್ದಿದ್ದರಿಂದ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

ಆ ಮುಖ್ಯಮಂತ್ರಿಯು ಯಲ್ಲಮ್ಮನಗುಡ್ಡಕ್ಕೆ ತೆರಳಿದ ವಿಷಯ ತಿಳಿದ ಕಳಸಾ ಬಂಡೂರಿ ಹೋರಾಟಗಾರರು ವಿನಯ ಕುಲಕರ್ಣಿ ನೇತೃತ್ವದಲ್ಲಿ ಮುತ್ತಿಗೆ ಹಾಕಲು ಮುನವಳ್ಳಿಯಲ್ಲಿ ಸೇರಿದ್ದರು. ಆದರೆ, ಸಾವಂತ್ ಅವರು ಸವದತ್ತಿ–ಇಮಾನಹೊಂಗಲ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳಿದರು. ಈ ವಿಷಯ ತಿಳಿದ ಹೋರಾಟಗಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹದಾಯಿ ಯೋಜನೆ ಅನುಷ್ಠಾನಕ್ಕೆ ಸರ್ಕಾರವು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.