ಗೋಕಾಕ: ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ನೀಡಿದ ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಎಂಬ ಮೂರು ಸೂತ್ರಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು. ಅವರ ತತ್ವಾದರ್ಶಗಳನ್ನು ಪಾಲಿಸಬೇಕು ಎಂದು ಪತ್ರಕರ್ತ ಸಾದಿಕ ಹಲ್ಯಾಳ ಹೇಳಿದರು.

ಗುರುವಾರ ಇಲ್ಲಿನ ಸತೀಶ್ ಶುಗರ್ಸ್ ಅಕಾಡೆಮಿಯ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಪ್ರಯುಕ್ತ ‘ಮನೆ–ಮನೆಗೆ, ಮನ ಮನಕ್ಕೆ ಬಾಬಾಸಾಹೇಬರು’ ಎಂಬ ಅಭಿಯಾನದ ಭಾಗವಾಗಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

‘ಡಾ. ಬಿ.ಆರ್. ಅಂಬೇಡ್ಕರ್ ಅವರು ಭಾರತದ ಸಂವಿಧಾನ ಶಿಲ್ಪಿ, ಮಹಾನ್ ಸಮಾಜ ಸುಧಾರಕ, ಅರ್ಥಶಾಸ್ತ್ರಜ್ಞ ಮತ್ತು ದಲಿತರ ಹಕ್ಕಿಗಾಗಿ ಹೋರಾಡಿದ ನಾಯಕರಾಗಿದ್ದಾರೆ’ ಎಂದು ಬಣ್ಣಿಸಿದರು.

ಅಧ್ಯಕ್ಷತೆಯನ್ನು ಸತೀಶ್ ಶುಗರ್ಸ್ ಅಕಾಡೆಮಿಯ ಪದವಿ ಕಾಲೇಜಿನ ಪ್ರಾಚಾರ್ಯ ಬಿ.ಎಚ್.ಸ್ವಾಮಿ ವಹಿಸಿದ್ದರು.

ಅಭಿಯಾನದಲ್ಲಿ ಸಿ.ಆರ್.ಲಕ್ಷೆಟ್ಟಿ, ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ, ಡಾ. ಎಂ.ಐ.ನದಾಫ್, ಎಸ್.ವೈ.ಸಣ್ಣಾಯಿಕ, ಎಸ್.ಆರ್.ಭಜಂತ್ರಿ, ಜಿ.ಆರ್.ಗುಡ್ಡೊಡಗಿ, ಎಸ್.ಎಲ್.ಮನ್ನಿಕೇರಿ ಭಾಗಿಯಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-21-856582248

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.