ಮಂಗಳವಾರ, ಸೆಪ್ಟೆಂಬರ್ 29, 2020
22 °C

ನಗರಸಭೆ ಸದಸ್ಯ ಎಸ್.ಎ.ಕೋತ್ವಾಲ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕಾಕ: ನಗರಸಭೆ ಹಾಲಿ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಎಸ್‌.ಎ. ಕೋತ್ವಾಲ್ (61) ಭಾನುವಾರ ನಿಧನರಾದರು.

ಅನಾರೋಗ್ಯದಿಂದಾಗಿ ಮೂರು ವಾರಗಳಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅವರಿಗೆ ಪತ್ನಿ, ಸಹೋದರರು ಇದ್ದಾರೆ.

ಕೋತ್ವಾಲ್‌ ಇಲ್ಲಿನ ತಂಜೀಮ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಈ ಹಿಂದಿನ 2 ಅವಧಿಗೆ ಅಧ್ಯಕ್ಷರಾಗಿದ್ದರು. ಸತತ 6 ಬಾರಿ ನಗರಸಭೆ ಸದಸ್ಯರಾಗಿದ್ದರು. ಎರಡು ಅವಧಿಗೆ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಗ್ರಾಮ ದೇವತೆಯರ ಜಾತ್ರಾ ಸಮಿತಿಯ ಆಡಳಿತ ಮಂಡಳಿಯ ಸದಸ್ಯರೂ ಆಗಿದ್ದರು. ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಆಪ್ತರಾಗಿದ್ದರು.

ಶ್ರದ್ಧಾಂಜಲಿ: ಇಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗೃಹ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.  ಈ ವೇಳೆ ಸ್ನೇಹಿತನನ್ನು ನೆನೆದು ಸಚಿವರು ಕಣ್ಣೀರಿಟ್ಟರು.

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು