ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೋಕಾಕ | ‘ನಕಲು ರಹಿತ ಪರೀಕ್ಷೆಗೆ ಸಹಕರಿಸಿ’

Published 20 ಮಾರ್ಚ್ 2024, 15:28 IST
Last Updated 20 ಮಾರ್ಚ್ 2024, 15:28 IST
ಅಕ್ಷರ ಗಾತ್ರ

ಗೋಕಾಕ: ‘ನಕಲು ರಹಿತ ಪರೀಕ್ಷೆ ನಡೆಸಲು ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಮುತುವರ್ಜಿ ವಹಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಗಾರ ಹೇಳಿದರು.

ಇಲ್ಲಿನ ಜೆ.ಎಸ್.ಎಸ್. ಕಾಲೇಜಿನ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂಗವಾಗಿ ಮಂಗಳವಾರ ನಡೆದ ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

‘ಪರೀಕ್ಷೆ ಪ್ರಾರಂಭದಿಂದ ಮುಗಿಯುವವರೆಗೆ ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರೊಂದಿಗೆ ಮೂರು ಜನ ಉನ್ನತ ಅಧಿಕಾರಿಗಳ ತಂಡ ನಿಯೋಜಿಸಲಾಗಿರುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇರುತ್ತದೆ. ವಲಯದ ಎಲ್ಲ ಅಧಿಕಾರಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಸಹಕರಿಸಬೇಕು’ ಎಂದರು.

‘ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ವಿತರಿಸುವಾಗ ಎಚ್ಚರ ವಹಿಸಬೇಕು. ಪರೀಕ್ಷಾ ಕೊಠಡಿಯಲ್ಲಿ ಆಕಸ್ಮಿಕವಾಗಿ ನಡೆಯುವ ಸಣ್ಣ ತಪ್ಪುಗಳಿಂದ ಪರೀಕ್ಷಾರ್ಥಿಗಳು ತೊಂದರೆ ಅನುಭವಿಸಬಹುದು. ಹೀಗಾಗದಂತೆ ಕ್ರಮ ವಹಿಸಿ’ ಎಂದು ಸಲಹೆ ನೀಡಿದರು.

ತಹಶೀಲ್ದಾರ್‌ ಮೋಹನ ಭಸ್ಮೆ, ಪಿಎಸ್ಐ ಕೆ. ವಾಲಿಕರ, ನೋಡಲ್ ಅಧಿಕಾರಿ ಬಿ.ಎಂ.ವಣ್ಣೂರ, ಆರ್.ಎಂ. ದೇಶಪಾಂಡೆ, ಜಿ.ಎನ್. ಸಾಂಗಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT