ಗೋಕಾಕ: ‘ಹುಕ್ಕೇರಿ ತಾಲ್ಲೂಕಿನ ಸಾರಾಪೂರ ಗ್ರಾಮದ ಶಾಂತಿನಾಥ ದಿಗಂಬರ್ ಜೈನ್ ಮಂದಿರ ವತಿಯಿಂದ ಸಮುದಾಯ ಭವನ ನಿರ್ಮಿಸಲು ₹50 ಲಕ್ಷ ಹಾಗೂ ಬಾಗೇವಾಡಿಯ ಆದಿನಾಥ ಭಸ್ತಿ ದೇವಸ್ಥಾನ ಕಮಿಟಿಯಿಂದ ಸಮುದಾಯ ಭವನ ನಿರ್ಮಿಸಲು ₹40 ಲಕ್ಷ ಅನುದಾನವನ್ನು ಸರ್ಕಾರ ಮಂಜೂರು ಮಾಡಿದೆ’ ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ ಹುಕ್ಕೇರಿ ತಾಲೂಕಿನ 23 ಗ್ರಾಮಗಳಿಗೆ ಲೋಕೋಪಯೋಗಿ ಇಲಾಖೆಯಿಂದ ₹1 ಕೋಟಿ ವೆಚ್ಚದಲ್ಲಿ ಹೈಮಾಸ್ಟ್ ದೀಪ ಅಳವಡಿಸಲು ಆದೇಶಿಸಲಾಗಿದೆ’ ಎಂದರು.

‘ಹರಗಾಪುರ, ಹಡಲಗಾ, ಕೆ.ಎಸ್. ನಾಗನೂರು, ಶಿರಪೂರ ಗ್ರಾಮಗಳಲ್ಲಿ ವಾಲ್ಮೀಕಿ ಭವನ ನಿರ್ಮಿಸಲು ತಲಾ ₹20 ಲಕ್ಷ, 17 ಗ್ರಾಮಗಳಲ್ಲಿ ಬಿ.ಆರ್. ಅಂಬೇಡ್ಕರ್ ಭವನ ಹಾಗೂ ಬಾಬು ಜಗಜೀವನರಾಮ್ ಭವನ ನಿರ್ಮಿಸಲು ತಲಾ ₹20 ಲಕ್ಷ ಅನುದಾನ ಬಿಡಗಡೆ ಮಾಡಲಾಗಿದೆ. ಅಲ್ಪಸಂಖ್ಯಾತರ ಕಾಲೊನಿಗಳಲ್ಲಿಯೂ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.