ಗುರುವಾರ , ಆಗಸ್ಟ್ 11, 2022
20 °C

ಗೋಕಾಕ: ಮೋದಿ ಜನ್ಮ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕಾಕ: ‘ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಸೇವೆ ಹಾಗೂ ಜಾಗೃತಿ ಕಾರ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ’ ಎಂದು ಪಕ್ಷದ ಗ್ರಾಮೀಣ ಘಟಕದ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು.

ಮೋದಿ ಜನ್ಮದಿನ ಅಂಗವಾಗಿ ಬಿಜೆಪಿ ನಗರ ಹಾಗೂ ಗ್ರಾಮೀಣ ಘಟಕದಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ಶಿವಾ ಪ್ರತಿಷ್ಠಾನದ ಮಕ್ಕಳಿಗೆ ಹಣ್ಣುಗಳನ್ನು ವಿತರಿಸಿ ಮಾತನಾಡಿದರು.

‘ಪಕ್ಷದಿಂದ 7 ದಿನಗಳವರೆಗೆ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡಲಾಗುವುದು. ನೈರ್ಮಲ್ಯ ಜಾಗೃತಿ ಮೂಡಿಸಲಾಗುವುದು’ ಎಂದರು.

ಮುಖಂಡರಾದ ಭೀಮಗೌಡ ಪೋಲಿಸಗೌಡರ, ಹನಮಂತ ದುರ್ಗನ್ನವರ, ಸುರೇಶ ಸನದಿ, ಪದಾಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು