ಗೋಕಾಕ: ಭಾರತೀಯ ಅಂಚೆ ಇಲಾಖೆಯು ಇಲ್ಲಿನ ಅಂಚೆ ಅಧೀಕ್ಷಕರ ಕಾರ್ಯಾಲಯ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಇದೇ ಶುಕ್ರವಾರ 15ರಂದು ಬೆಳಿಗ್ಗೆ 11ಕ್ಕೆ ನಗರದ ಯೋಗಿಕೊಳ್ಳ ಮಾರ್ಗದಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಲು ನಿಗದಿಯಾಗಿರುವ ನೇರ ಸಂದರ್ಶನಕ್ಕೆ ಹಾಜರಾಗಲು ಆಹ್ವಾನಿಸಿದೆ.

ಹತ್ತನೇ ತರಗತಿ ಉತ್ತೀರ್ಣರಾದ, ವಯೋಮಿತಿ 18 ವರ್ಷ ಪೂರೈಸಿದ ಮತ್ತು 50 ವರ್ಷದೊಳಗಿನ ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಪ್ರತಿನಿಧಿಗಳು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಸಂದರ್ಶನಕ್ಕೆ ಬರಬಹುದಾಗಿದೆ.

ಆಯ್ಕೆಗೊಂಡ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಷನ್ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-21-202216239

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.