ಗೋಕಾಕ: ತಾಲ್ಲೂಕಿನ ಪುಣ್ಯಕ್ಷೇತ್ರ ಸಾವಳಗಿಯಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶೂನ್ಯ ಸಿಂಹನಾಧೀಶ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿ ಸಿದ್ದ ಸಂಸ್ಥಾನ ಪೀಠ ಸುಕ್ಷೇತ್ರ ಸಾವಳಗಿ ಮಹಾಸನ್ನಿಧಿ ಅವರ ನೇತೃತ್ವದಲ್ಲಿ ಭಕ್ತಿಭಾವ ಮತ್ತು ವೈಭವದೊಂದಿಗೆ ಅದ್ದೂರಿಯಾಗಿ ಜರುಗಿತು.

ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು, ಅಭಿಷೇಕಗಳು ನೆರವೇರಿದವು. ಸುತ್ತಮುತ್ತಲಿನ ಗ್ರಾಮಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಹಿಂದೂ-ಮುಸ್ಲಿಂ ಬಾಂಧವರ ಭಕ್ತಿ-ಭಾವದ ಪ್ರತೀಕವಾಗಿರುವ ಶ್ರೀ ಶಿವಲಿಂಗೇಶ್ವರ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಅಡ್ಡ ಪಲ್ಲಕ್ಕಿ ಉತ್ಸವವು ಜಾತ್ರೆಯ ಮುಖ್ಯ ಆಕರ್ಷಣೆಯಾಗಿದ್ದು, ಭಕ್ತರು ಪಲ್ಲಕ್ಕಿಯನ್ನು ಹೊತ್ತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-21-676544435

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.