ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟ್ಟಣ ಪಂಚಾಯ್ತಿಗೆ ಅಕ್ಕತಂಗೇರಹಾಳ: ಗ್ರಾಮಸ್ಥರ ವಿರೋಧ

Last Updated 21 ಡಿಸೆಂಬರ್ 2021, 12:55 IST
ಅಕ್ಷರ ಗಾತ್ರ

ಬೆಳಗಾವಿ: ಗೋಕಾಕ ತಾಲ್ಲೂಕಿನ ಅಕ್ಕತಂಗೇರಹಾಳ ಗ್ರಾಮವನ್ನು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೆ ಏರಿಸಿರುವುದನ್ನು ವಿರೋಧಿಸಿ ಗ್ರಾಮಸ್ಥರು ಸುವರ್ಣ ವಿಧಾನಸೌಧ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.

‘ಅಧಿಕಾರಿಗಳು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ, ಅಂಕಲಗಿ ಹಾಗೂ ಅಕ್ಕತಂಗೇರಹಾಳ ಗ್ರಾಮಗಳನ್ನು ಸೇರಿಸಿ ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿಸಿದ್ದಾರೆ. ಈ ವೇಳೆ ಅನುಸರಿಸಬೇಕಾದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ’ ಎಂದು ಆರೋಪಿಸಿದರು.

‘ನಾವು ಕೃಷಿಯನ್ನೇ ಅವಲಂಬಿಸಿ, ಬದುಕು ಸಾಗಿಸುತ್ತಿದ್ದೇವೆ. ನಮ್ಮೂರು ಪಟ್ಟಣ ಆಗುವುದರಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಲಿದೆ. ನಮ್ಮ ಮಕ್ಕಳಿಗೆ ಗ್ರಾಮೀಣ ಕೃಪಾಂಕ ಮತ್ತಿತರ ಶೈಕ್ಷಣಿಕ ಸೌಲಭ್ಯಗಳು ಕೈತಪ್ಪಲಿವೆ. ಈ ಹಿಂದಿನಂತೆ ಅಂಕಲಗಿ ಗ್ರಾಮ ಪಂಚಾಯ್ತಿಯಲ್ಲೇ ಮುಂದುವರಿಸಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ಬಸನಗೌಡ ಹೊಳಿಯಾಚಿ, ನಾಸೀರ್ ದೇಸಾಯಿ, ರಾಜುಗೌಡ ನಿರ್ವಾಣಿ, ಶಂಕರ ಬೆಣ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT