ಸೋಮವಾರ, ಸೆಪ್ಟೆಂಬರ್ 20, 2021
23 °C

ಯುಪಿಎಸ್‌ಸಿ ತರಬೇತಿ: ದೆಹಲಿಯಿಂದ ವಾಪಸಾಗಿದ್ದ ಗೋಕಾಕ ಯುವಕನಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

covid19 positive

ಗೋಕಾಕ: ದೆಹಲಿಯಲ್ಲಿ ಯುಪಿಎಸ್‌ಸಿ ಪರೀಕ್ಷೆಯ ತರಬೇತಿ ಪಡೆದು ಸ್ವಗ್ರಾಮಕ್ಕೆ ವಾಪಸ್ಸಾಗಿದ್ದ ತಾಲ್ಲೂಕಿನ ಶಿಲ್ತಿಭಾವಿ ಗ್ರಾಮದ ಯುವಕನಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಇವರನ್ನು ಚಿಕಿತ್ಸೆಗಾಗಿ ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಂಕಿತ ಯುವಕ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ದೆಹಲಿಯಿಂದ ಗ್ರಾಮಕ್ಕೆ ಮರಳಿ ಬಂದಿದ್ದರು. 14 ದಿನಗಳ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರವು ಕ್ವಾರಂಟೈನ್‌ ಅವಧಿಯನ್ನು ಕಡಿತಗೊಳಿಸಿದ್ದರಿಂದ, ಇವರನ್ನು 12ನೇ ದಿನಕ್ಕೆ ಕ್ವಾರಂಟೈನ್‌ನಿಂದ ಬಿಡುಗಡೆಗೊಳಿಸಿ ಮನೆಗೆ ಕಳುಹಿಸಿಕೊಡಲಾಗಿತ್ತು.

ಯುವಕನಿಗೆ ಕೋವಿಡ್‌–19 ಸೋಂಕು ತಗುಲಿರುವುದು ಮಂಗಳವಾರ ಮಧ್ಯಾಹ್ನ ದೃಢಪಟ್ಟಿದೆ. ಯುವಕನ ಮನೆಯ ಎಲ್ಲ ಆರೂ ಜನರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಗ್ರಾಮವನ್ನು ಸೀಲ್‌ಡೌನ್‌ ಮಾಡಲಾಗಿದೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು