ಗೋಕಾಕ: ‘ಈದ್ ಮಿಲಾದ ಮತ್ತು ಗಣೇಶ್ ಹಬ್ಬವನ್ನು ಎಲ್ಲರೂ ಒಂದಾಗಿ ಭಾವೈಕ್ಯ ಮತ್ತು ಶಾಂತಿಯುತವಾಗಿ ಆಚರಿಸೋಣ’ ಎಂದು ತಹಶೀಲ್ದಾರ್ ಮೋಹನ ಭಸ್ಮೆ ಕರೆ ನೀಡಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ನಗರಸಭೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಗಣೇಶ ಚತುರ್ಥಿಯಲ್ಲಿ ಹಸಿರು ಪಟಾಕಿಗಳನ್ನು ಬಳಸಬೇಕು. ಸಾರ್ವಜನಿಕರ ಭಾವನೆಗೆ ಧಕ್ಕೆಯಾಗದಂತೆ ಹಬ್ಬಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಹಬ್ಬದ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಆಚರಿಸೋಣ’ ಎಂದರು.

ಶಹರ ಠಾಣೆ ಎಸ್ಐ ಕೆ.ವಾಲಿಕರ ಮಾತನಾಡಿ, ‘ನಗರದಲ್ಲಿ ಸ್ಥಾಪಿಸುವ ಗಣೇಶ್ ಪೆಂಡಾಲ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಅಗ್ನಿ ಅವಘಡ ಸಂಭವಿಸದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದಲ್ಲಿ ಕಾನೂನು ಸುವ್ಯವಸ್ಥೆ ಧಕ್ಕೆ ತರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಪೌರಾಯುಕ್ತ ರಮೇಶ ಜಾದವ, ಎಂ.ಎಚ್.ಗಜಾಕೋಶ, ಎಸ್.ಪಿ.ವರಾಳೆ, ವಿನೋದ ಪಾಟೀಲ, ಅಗ್ನಿ ಶಾಮಕ ಠಾಣಾಧಿಕಾರಿ ಎಸ್.ಎನ್.ಮೆಳವಂಕಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.