ಶನಿವಾರ, ಅಕ್ಟೋಬರ್ 24, 2020
18 °C

ಚಿನ್ನದ ಸರ ಕಳವು: ಮೂವರು ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಚನ್ನಮ್ಮನ ಕಿತ್ತೂರು ತಾಲ್ಲೂಕಿನ ದೇವರಶೀಗಿಹಳ್ಳಿ ಹೊರವಲಯದಲ್ಲಿ ಹುಲ್ಲಿನ ಹೊರೆ ಹೊತ್ತು ಹೋಗುತ್ತಿದ್ದ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಆರೋಪದ ಮೇಲೆ ಮೂವರನ್ನು ಕಿತ್ತೂರು ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ದೇವರಶೀಗಿಹಳ್ಳಿ ಗ್ರಾಮದ ನಾಗೇಶ ದೊಡಮನಿ, ವಿಜಯ ಮದನಬಾವಿ ಮತ್ತು ಚೇತನ ಹಿರೇಮಠ ಬಂಧಿತರು. ಅವರಿಂದ, ಕಳವು ಮಾಡಿದ್ದ ₹ 1.40 ಲಕ್ಷ ಮೌಲ್ಯದ 35 ಗ್ರಾಂ. ತೂಕದ ಚಿನ್ನದ ಸರ, ದ್ವಿಚಕ್ರ ವಾಹನ, ₹ 10 ಸಾವಿರ, 2 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತನ್ನಿಂದ ಸೆ.23ರಂದು ಸರ ಕಿತ್ತುಕೊಂಡು ಹೋಗ ಬಗ್ಗೆ ರಾಮನಗೌಡ ಪಾಟೀಲ ದೂರು ನೀಡಿದ್ದರು. ಸಿಪಿಐ ಮಂಜುನಾಥ ಕುಸುಗಲ್, ಪಿಎಸ್‌ಐ ಎಸ್.ಬಿ.  ಮಾವಿನಕಟ್ಟಿ ಹಾಗೂ ಸಿಬ್ಬಂದಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ತಂಡವನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ಪ್ರಶಂಸಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.