ಬುಧವಾರ, ನವೆಂಬರ್ 25, 2020

ಇಬ್ಬರು ಮಕ್ಕಳ ತಾಯಿಗೆ 2 ಚಿನ್ನದ ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಗಳಖೋಡ: ಇಲ್ಲಿನ ನಿವಾಸಿ ಎರಡು ಮಕ್ಕಳ ತಾಯಿ ಶಿವಲೀಲಾ ಪಾರ್ವತಿ (ಶೇಗುಣಸಿ) ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (ಆರ್‌ಸಿಯು) ಸ್ನಾತಕೋತ್ತರ ಪದವಿ ಇಂಗ್ಲಿಷ್ ವಿಭಾಗದಲ್ಲಿ ಚಿನ್ನದ ಪದಕ ಪಡೆದು ಗಮನಸೆಳೆದಿದ್ದಾರೆ.

ಬೆಳಗಾವಿಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸತೀಶ ಜಾರಕಿಹೊಳಿ ಪ್ರದಾನ ಮಾಡಿದರು. ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಇದ್ದರು.

ಬೆಳಗಾವಿ ತಾಲ್ಲೂಕಿನ ಅರಳಿಕಟ್ಟಿಯವರಾದ ಅವರು, ಪಿಯು ಬಳಿಕ ಇಲ್ಲಿನ ಇಂಗ್ಲಿಷ್ ಉಪನ್ಯಾಸಕ ರಾಜಶೇಖರ ಶೇಗುಣಸಿ ಅವರನ್ನು 2012ರ ಏ. 15ರಂದು ವಿವಾಹವಾದರು. ಈ ದಂಪತಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ. ಶಿಕ್ಷಣ ಮುಂದುವರಿಸಬೇಕು ಎನ್ನುವ ಪತ್ನಿಯ ಆಸೆಗೆ ಪತಿ ನೀರೆರೆದರು. ಬಳಿಕ ಶಿಕ್ಷಣ ಮುಂದುವರಿಸಿದ ಶಿವಲೀಲಾ ಡಾ.ಸಿ.ಬಿ. ಕುಲಿಗೋಡ ಪದವಿ ಕಾಲೇಜಿನಲ್ಲಿ ಇಂಗ್ಲಿಷ್, ಇತಿಹಾಸ, ಸಮಾಜವಿಜ್ಞಾನ ವಿಷಯ ತೆಗೆದುಕೊಂಡು ಬಿ.ಎ. ಪದವಿ ಪಡೆದರು. ಹೆಚ್ಚಿನ ಅಂಕ ಗಳಿಸಿ, ಇಂಗ್ಲಿಷ್ ಮತ್ತು ಇತಿಹಾಸ ವಿಷಯಗಳಲ್ಲಿ 2 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದರು. ಆರ್‌ಸಿಯುನಲ್ಲಿ ಸ್ನಾತಕೋತ್ತರ ಕೋರ್ಸ್‌ಗೆ ದಾಖಲಾಗಿದ್ದರು.

ಅವರು ಡಾ.ಸಿ.ಬಿ. ಕುಲಿಗೋಡ ಪದವಿ ಕಾಲೇಜಿನ ಒಂದೂವರೆ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ್ದಾರೆ. ‘ಕೆಪಿಎಸ್‌ಸಿ ಮತ್ತು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಬೇಕೆಂಬ ಗುರಿ ಇದೆ. ತಂದೆ, ತಾಯಿ ಹಾಗೂ ಪತಿಯ ಸಹಕಾರದಿಂದ ಉನ್ನತ ಶಿಕ್ಷಣ ಹೊಂದಲು ಸಾಧ್ಯವಾಯಿತು’ ಎನ್ನುತ್ತಾರೆ ಅವರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು