ಬೆಳಗಾವಿ: ‘ಕೇಂದ್ರ ಸಚಿವ ಸಂಪುಟದಲ್ಲಿ ಕರ್ನಾಟಕಕ್ಕೆ ಮಹತ್ವದ ಸ್ಥಾನಗಳು ದೊರೆತಿವೆ. ಅತ್ಯಂತ ಪ್ರಮುಖವಾದ ವಿತ್ತ ಖಾತೆಯನ್ನು ರಾಜ್ಯ ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್ ಅವರಿಗೆ ನೀಡಿಲ್ಲವೇ? ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೊಸರಲ್ಲಿ ಕಲ್ಲು ಹುಡುಕುವುದನ್ನು ಬಿಡಲಿ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿರುಗೇಟು ನೀಡಿದರು.

ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ಸಂಪುಟ ಪುನರ್‌ರಚನೆ ವೇಳೆ ರಾಜ್ಯದ ನಾಲ್ವರಿಗೆ ಅವಕಾಶ ನೀಡಿ ಸಾಮಾಜಿಕ ನ್ಯಾಯವನ್ನು ಪಾಲಿಸಲಾಗಿದೆ. ಎಲ್ಲ ವರ್ಗದವರಿಗೂ ಅವಕಾಶ ಕೊಡಲಾಗಿದೆ. ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ, ಮೈಸೂರು ಭಾಗಕ್ಕೂ ಪ್ರಾನಿನಿಧ್ಯ ನೀಡಲಾಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಹಾಗೂ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದರು.

‘ರಾಜ್ಯದ ಹಿತದೃಷ್ಟಿಯಿಂದ ಅತ್ಯುತ್ತಮವಾದ ಸಚಿವ ಸಂಪುಟ ಪುನರ್‌ರಚನೆ ಇದಾಗಿದೆ’ ಎಂದು ಸಮರ್ಥಿಸಿಕೊಂಡರು.

‘ಕಾಂಗ್ರೆಸ್ ಆಡಳಿತದಲ್ಲಿದ್ದಾಗ ರಾಜ್ಯದವರಿಗೆ ಎಷ್ಟು ಪಾಲು ಕೊಟ್ಟಿದ್ದರು?’ ಎಂದು ಕೇಳಿದರು. ‘ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ಬಂದಿಲ್ಲವಲ್ಲ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.