ಶುಕ್ರವಾರ, ಡಿಸೆಂಬರ್ 3, 2021
20 °C

ಹುಕ್ಕೇರಿಯ ಬೋರಗಲ್‌ನಲ್ಲಿ ಒಂದೇ ಕುಟುಂಬದ ಐವರ ಸಾವು: ಸಚಿವ ಕಾರಜೋಳ ಕಂಬನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೋರಗಲ್ ಗ್ರಾಮದ ವ್ಯಕ್ತಿಯು ವಿಷ ಸೇವಿಸಿ ನಾಲ್ವರು ಮಕ್ಕಳಿಗೂ ನೀಡಿ ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಕಪ್ಪು ಶಿಲೀಂಧ್ರ ಸೋಂಕಿನಿಂದ ಪತ್ನಿ ಕಳೆದುಕೊಂಡಿದ್ದ ವ್ಯಕ್ತಿಯು ನಾಲ್ಕು ಮಕ್ಕಳಿಗೆ ವಿಷಪ್ರಾಶನ ಮಾಡಿ ಆತ್ಮಹತ್ಯೆಗೆ ಶರಣಾಗಿರುವುದು ಮನಕಲಕುತ್ತದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

ಓದಿ: 

ಎಂತಹ ಪರಿಸ್ಥಿತಿಯಲ್ಲೂ ಧೈರ್ಯ‌ ಕಳೆದುಕೊಂಡು ಪ್ರಾಣಕ್ಕೆ ಸಂಚಕಾರ ತಂದುಕೊಳ್ಳದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಮೃತ ವ್ಯಕ್ತಿಯು ನಿವೃತ್ತ ಯೋಧ ಎಂದು ತಿಳಿದುಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು