ಗುರುವಾರ , ಮಾರ್ಚ್ 30, 2023
32 °C

‘ಕಿತ್ತೂರು ಕರ್ನಾಟಕ‘ ಘೋಷಣೆ: ಬೆಳಗಾವಿಯಲ್ಲಿ ಸಂಭ್ರಮಾಚರಣೆ

‍ಪ್ರಜಾವಾಣಿ ವಾರ್ತೆ‌ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಮುಂಬೈ ಕರ್ನಾಟಕ ಪ್ರದೇಶವನ್ನು ಕಿತ್ತೂರು ಕರ್ನಾಟಕ ಎಂದು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಸಂಭ್ರಮಾಚರಣೆ ಸೋಮವಾರ ನಡೆಯಿತು.

ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಅವರು ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

‘ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ನಡೆದ ಕಿತ್ತೂರು ಉತ್ಸವದಲ್ಲಿ ನೀಡಿದ ಭರವಸೆಯನ್ನು ಈಡೇರಿಸಿದ್ದಾರೆ. ಈ ಮೂಲಕ ಇಲ್ಲಿನ ಜನರ ಪ್ರೀತಿಗೆ ಭಾಜನವಾಗಿದ್ದಾರೆ’ ಎಂದು ಸಂಸದರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.