ನಾಗರಮುನ್ನೋಳಿ: ‘ಗ್ರಾಮೀಣ ಭಾಗದಲ್ಲಿ ಜಾನುವಾರು ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಇದಕ್ಕಾಗಿ ಹೊಸ ಮಾದರಿ ತಂತ್ರಜ್ಞಾನ ಬಳಸಲಾಗುತ್ತಿದೆ’ ಎಂದು ಬೆಮುಲ್ ನಿರ್ದೇಶಕ ವಿ.ಬಿ. ಈಟಿ ಹೇಳಿದರು.

ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದಿಂದ ಚಿಕ್ಕೋಡಿ ವಿಭಾಗದ ಕೃತಕ ಗರ್ಭಧಾರಣೆ ಕಾರ್ಯಕ್ರಮದಲ್ಲಿ ಸಿಬ್ಬಂದಿಗೆ ಟ್ಯಾಬ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ನಮ್ಮ ಜಿಲ್ಲೆಯವರೆ ಆದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶದಲ್ಲಿ ಹೈನುಗಾರಿಕೆಯಲ್ಲಿ ಪ್ರಗತಿ ಸಾಧಿಸಲು ಹಾಗೂ ಜಿಲ್ಲೆಯನ್ನು ಮಾದರಿಯಾಗಿಸಲು ಹಲವು ಯೋಜನೆ ಜಾರಿಗೆ ತರಲಾಗುತ್ತಿದೆ’ ಎಂದರು.

ಬೆಮುಲ್ನ ಅಧಿಕಾರಿ ಡಾ.ಜಯಪ್ರಕಾಶ ಮಣ್ಣೇರಿ, ಡಾ.ವೆಂಕಟೇಶ ಜೋಶಿ ಮಾತನಾಡಿದರು.

ಡಾ.ಭಾಗ್ಯಶ್ರೀ, ಶ್ರೀಶೈಲ ಪೂಜೇರಿ, ಪುಂಡಲಿಕ ಈಟಿ ಇದ್ದರು.

ಡಾ.ಸುನೀಲ ಕುಂಬಾರ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.