ಸೋಮವಾರ, ಜೂನ್ 14, 2021
24 °C

‘ಲಾಕ್‌ಡೌನ್‌ನಿಂದ ಜನರ ಪ್ರಾಣ ರಕ್ಷಣೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸವದತ್ತಿ: ‘ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಲಾಕ್‌ಡೌನ್ ಘೋಷಿಸಿದ್ದರಿಂದಾಗಿ ಜನರ ಜೀವ ರಕ್ಷಿಸಲು ಸಾಧ್ಯವಾಯಿತು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.

ತಾಲ್ಲೂಕು ಆಡಳಿತದಿಂದ ಇಲ್ಲಿನ ಎಸ್‌ಕೆ ಪ್ರೌಢಶಾಲೆ ಮೈದಾನದಲ್ಲಿ ಶನಿವಾರ ನಡೆದ 74ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಲಾಕ್‌ಡೌನ್‌ದಿಂದ ಜನಸಾಮಾನ್ಯರು ಸೇರಿದಂತೆ ಸರ್ಕಾರದ ರಾಜಸ್ವ ಸಂಗ್ರಹಕ್ಕೂ ತೊಂದರೆಯಾಗಿದೆ. ಆದರೂ ಸರ್ಕಾರಗಳು ಎದೆಗುಂದಿಲ್ಲ. ನಿರಂತರ  ಸಭೆ ನಡೆಸಿ ಕೋವಿಡ್ ಹತೋಟಿಯಲ್ಲಿಡಲಾಗಿತ್ತು. ದುರ್ದೈವದಿಂದ ಸಮುದಾಯಕ್ಕೆ ಹರಡಿದ್ದು ವೈಫಲ್ಯಕ್ಕೆ ಕಾರಣವಾಯಿತು. ನಾವೀಗ ಇನ್ನೂ ಸಂಕಷ್ಟದಲ್ಲಿದ್ದೇವೆ. ಎಲ್ಲರೂ ಎಚ್ಚರಿಕೆಯಿಂದ ಇರಬೇಕು’ ಎಂದರು.

ಬಿಇಒ ಎ.ಎನ್. ಕಂಬೋಗಿ ಮಾತನಾಡಿದರು. ಕೊರೊನಾ ಯೋಧರನ್ನು ಸನ್ಮಾನಿಸಲಾಯಿತು. ಪಿಎಸ್‌ಐ ನಾಗನಗೌಡ ಕಟ್ಟಿಮನಿಗೌಡ್ರ ನೇತೃತ್ವದಲ್ಲಿ ಪಥಸಂಚಲನ ನಡೆಯಿತು.

ತಾಲ್ಲೂಕು ‍ಪಂಚಾಯಿತಿ ಅಧ್ಯಕ್ಷ ವಿನಯಕುಮಾರ ದೇಸಾಯಿ, ಸಿಪಿಐ ಮಂಜುನಾಥ ನಡುವಿನಮನಿ, ಇಒ ಯಶವಂತಕುಮಾರ, ಆರೋಗ್ಯಾಧಿಕಾರಿ ಮಹೇಶ ಚಿತ್ತರಗಿ, ಪುರಸಭೆ ಮುಖ್ಯಾಧಿಕಾರಿ ಪಿ.ಎಂ. ಚನ್ನಪ್ಪನವರ ಇದ್ದರು.

ಹಲವೆಡೆ ಧ್ವಜಾರೋಹಣ: ನಾಯಕ ವಿದ್ಯಾರ್ಥಿ ಒಕ್ಕೂಟದ ಶಾಲೆಯಲ್ಲಿ ನಿಂಗಪ್ಪ ಖೋದಾನಪೂರ ಧ್ವಜಾರೋಹಣ ನೆರವೇರಿಸಿದರು.

ತಹಶೀಲ್ದಾರ್‌ ಕಚೇರಿ, ಎಸ್.ಎಲ್.ಎ.ಒ. ಕ್ರಾಸ್ ಆಟೊರಿಕ್ಷಾ ನಿಲ್ದಾಣ, ಯಲ್ಲಮ್ಮ ದೇವಸ್ಥಾನ, ಹಗ್ಗದೇವರ ಓಣಿ, ನಂದಿ ಅರ್ಬನ್ ಬ್ಯಾಂಕ್‌, ವರದಾ ವಿವಿಧೋದ್ದೇಶಗಳ ಸಹಕಾರಿ ಸಂಘ, ಪುರಸಭೆ, ಅರಣ್ಯ ಇಲಾಖೆ, ಎಪಿಎಂಸಿ, ಬೆಳ್ಳುಬ್ಬಿ ಕಾಲೇಜು, ಜಿ.ಎ. ಹಿರೇಮಠ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ವೃದ್ಧಾಶ್ರಮ, ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.